ದೇಶ

ಮಹಾರಾಷ್ಟ್ರ: ಪ್ರತಿಭಟನೆ ವಾಪಸ್ ಪಡೆದ ಸರ್ಕಾರಿ ವೈದ್ಯರು

Srinivas Rao BV
ಮುಂಬೈ: ಮಹಾರಾಷ್ಟ್ರದಲ್ಲಿ ವೈದ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು, ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. 
ಬೇಡಿಕೆಗಳನ್ನು ಪರಿಗಣಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಬಹುತೇಕ ವೈದ್ಯರು ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಒಪಿಡಿಗಳೂ ಸಹ ಎಂದಿನಂತೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದ್ದು, ಜನರಲ್ ವಾರ್ಡ್ ಗಳಿಗೆ ವೈದ್ಯರು ಭೇಟಿ ನೀಡಿ ರೋಗಿಗಳನ್ನು ಪರೀಕ್ಷಿಸಿದ್ದಾರೆ ಎಂದು ಕೆಇಎಂ ಆಸ್ಪತ್ರೆಯ ಡೀನ್ ಡಾ.ಅವಿನಾಶ್ ಸುಪೆ ಮಾಹಿತಿ ನೀಡಿದ್ದಾರೆ. 
ವೈದ್ಯರಿಗೆ ತಕ್ಷಣ ಪ್ರತಿಭಟನೆ ಹಿಂಪಡೆದು ಕೆಲಸಕ್ಕೆ ಹಾಜರಾಗುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಸೂಕ್ತ ರಕ್ಷಣೆಯ ಭರವಸೆ ನೀಡಿ, ಕೂಡಲೇ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದರು. ಇದಾದ ಬಳಿಕ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. 
SCROLL FOR NEXT