ದೇಶ

ಮಹಿಳೆಯರಿಗೆ ರಕ್ಷಣೆ ಹೆಚ್ಚಿಸುವುದೇ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಮುಖ ಅಜೆಂಡಾ: ಬಿಜೆಪಿ

Shilpa D

ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದೇ ನೂತನ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಮುಖ ಉದ್ದೇಶವಾಗಿದೆ ಎಂದು ಬಿಜೆಪಿ ಹೇಳಿದೆ,

ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಟೀಕೆ, ದೌರ್ಜನ್ಯ ಮುಂತಾದ ಅಪರಾಧ ಪ್ರಕರಣಗಳನ್ನು ತಡೆಯುವುದು ಹಾಗೂ ಮಹಿಳೆರಿಗೆ ಹೆಚ್ಚಿನ ಭದ್ರತೆ ಒದಗಿಸುವುದೇ ಸಿಎಂ ಯೋಗಿ ಆದಿತ್ಯ ನಾಥ್ ಅವರ ಅಜೆಂಡವಾಗಿದೆ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಹೇಳಿದ್ದಾರೆ.

ಆ್ಯಂಟಿ ರೋಮಿಯೋ ಸ್ಕಾಡ್ ಗಸ್ತು ತಿರುಗುವುದು ಜೋಡಿಗಳಿಗೆ ತೊಂದರೆ ಕೊಡುವುದಕ್ಕಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆಗಟ್ಟುವುದೇ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಅನಧಿಕೃತ ಕಸಾಯಿಖಾನೆಗಳನ್ನು  ತೆರವುಗೊಳಿಸಲಾಗುತ್ತದೆ. ಈಗಾಗಲೇ ಹಲವು ಕಸಾಯಿಖಾನೆಗಳನ್ನು ಕ್ಲೋಸ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೇವಲ ಉತ್ತರ ಪ್ರದೇಶದಲ್ಲಿ ಮಾತ್ರವಲ್ಲ, ಎಲ್ಲಡೆಯೂ ಇರುವ ಅನಧಿಕೃತ ಕಸಾಯಿಖಾನೆಗಳನ್ನು ಮುಚ್ಚಿಸುವ ಸಂಬಂಧ ನಮ್ಮ ಪಕ್ಷ ಹೋರಾಟ ನಡೆಸಿತ್ತು ಎಂದು ಹುಸೇನ್ ವಿವರಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

SCROLL FOR NEXT