ಅಹಮದಾಬಾದ್: ಗುಜರಾತ್ ರಾಜ್ಯದ ಪಠಾಣ್ ಜಿಲ್ಲೆಯಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು, ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟು 10ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ.
ಪಠಾಣ್ ಜಿಲ್ಲೆಯ ವಡವಾಲಿಯಲ್ಲಿ ಗ್ರಾಮದಲ್ಲಿ ಎರಡು ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಜಗಳವಾಗಿದ್ದಾರೆ, ಈ ಜಗಳ ಕೋಮು ಗಲಭೆಗೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆದಿದ್ದು, ಕೆಲವರು ಸ್ಥಳೀಯ 30 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.
ಗ್ರಾಮದ ಸುತ್ತರೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರಸ್ತುತ ಪರಿಸ್ಥಿತಿ ನಿಯಂತ್ರದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಪರೀಕ್ಷೆ ಬಳಿ ಇಬ್ಬರು ವಿದ್ಯಾರ್ಥಿಗಳ ನಡುವೆ ಜಗಳವಾಗಿದೆ. ಆದರೆ, ಹಿಂಸಾಚಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಪ್ರಸ್ತುತ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics