ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಕಾನೂನಾತ್ಮಕ ಕಸಾಯಿಖಾನೆಗಳನ್ನು ಮುಟ್ಟುವುದಿಲ್ಲ: ಯೋಗಿ ಆದಿತ್ಯನಾಥ್ ಸ್ಪಷ್ಟನೆ

ಕಾನೂನಾತ್ಮಕ ಕಸಾಯಿಖಾನೆಗಳನ್ನು ಮುಟ್ಟುವುದಿಲ್ಲ, ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳ ವಿರುದ್ಧವಷ್ಟೇ ರಾಜ್ಯ ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಸ್ಪಷ್ಟನೆ...

ಗೋರಾಖ್ಪುರ: ಕಾನೂನಾತ್ಮಕ ಕಸಾಯಿಖಾನೆಗಳನ್ನು ಮುಟ್ಟುವುದಿಲ್ಲ, ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳ ವಿರುದ್ಧವಷ್ಟೇ ರಾಜ್ಯ ಸರ್ಕಾರ ಕ್ರಮಕೈಗೊಳ್ಳುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ.
ಗೋ ಕಳ್ಳಸಾಗಣೆ, ಮಾಂಸ ನಿಷೇಧ ಹಾಗೂ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಂಡಿರುವ ಹಿನ್ನಲೆಯಲ್ಲಿ ಪ್ರಶಂಸೆ ಹಾಗೂ ಟೀಕೆಗಳು ಕೇಳಿಬಂದ ಹಿನ್ನಲೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾನೂನಾತ್ಮಕವಾಗಿ ಕಾನೂನುಗಳನ್ನು ಪಾಲಿಸಿ, ಮಾನ್ಯ ಪರವಾನಗಿ ಪಡೆದುಕೊಂಡು ಕಸಾಯಿಖಾನೆಗಳನ್ನು ನಡೆಸುತ್ತಿರುವವರ ವಿರುದ್ಧ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ. ಆದರೆ, ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಎನ್ ಜಿಟಿ) ಗಾಳಿಗೆ ತೂರಿ ಸಾರ್ವಜನಿಕರ ಆರೋಗ್ಯದ ಜೊತೆಗೆ ಆಟವಾಡುವವರನ್ನು ಸರ್ಕಾರ ಸುಮ್ಮನೆ ಬಿಡುವುದಿಲ್ಲ. ಉತ್ತರಪ್ರದೇಶದಲ್ಲಿ ಮಾಡಬೇಕಾದದ್ದು ಬಹಳಷ್ಟು ಕೆಲಸಗಳಿವೆ. ಸರ್ಕಾರ ಹೇಗೆ ಕೆಲಸ ಮಾಡಬೇಕೆಂಬುದನ್ನು ಬಿಜೆಪಿ ತೋರಿಸಲಿದೆ. ಗೂಂಡಾ ರಾಜಕಾರಣ ಅಂತ್ಯವಾಗಿದ್ದು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದಾಗಿದೆ.
ಉತ್ತರಪ್ರದೇಶದ 22 ಕೋಟಿ ಜನತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಈ ಮೂಲಕ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. 
ಉತ್ತರಪ್ರದೇಶ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಹಳ ಚಿಂತಿಸುತ್ತಿದ್ದಾರೆ. ರಾಜ್ಯವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದನ್ನು ಅವರು ಬಯಸುತ್ತಿದ್ದರು. ಪೂರ್ವ ಉತ್ತರಪ್ರದೇಶ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿತ್ತು. ಆದರೆ, ಮೋದಿಯವರು ಗೋರಖ್ಪುರದಲ್ಲಿ ರಸಗೊಬ್ಬರ ಕಾರ್ಖಾನೆ ಮತ್ತು ಏಮ್ಸ್ ಆಸ್ಪತ್ರೆಗೆ ಅಡಿಪಾಯ ಹಾಕಿದರು. ಈ ಪ್ರದೇಶದ ಜನರು ಇದನ್ನು ಎಂದಿಗೂ ಮರೆಯುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಿದೆ. 
ಯುವಕರು, ಮಹಿಳೆಯರು, ರೈತರು ಹಾಗೂ ಕಾರ್ಮಿಕರು ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ. ಲೋಕಕಲ್ಯಾಣ ಸಂಕಲ್ಪ ಮತ್ತು ಉಸಿರಿನ್ನು ನಾನು ಕಾರ್ಯಗತಗೊಳಿಸುತ್ತೇವೆ. ಈಗಾಗಲೇ ಶೇ.100 ರಷ್ಟು ಗೋದಿಯನ್ನು ಖರೀದಿ ಮಾಡಲಾಗಿದೆ. ರೈತರಿಗೆ ನೀಡುವ ಬೆಂಬಲ ಹಣವನ್ನು ಅವರ ಖಾತೆಗಳಿಗೆ ನೇರವಾಗಿ ಜಮಾವಣೆ ಮಾಡಲಾಗುತ್ತದೆ. 
ಮಹಿಳೆಯರು ನಿರ್ಭೀತರಾಗಿ ರಾತ್ರಿ 11 ಸಮಯದಲ್ಲೂ ಓಡಾಡುವಂತಹ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರುತ್ತೇವೆ. ಆಗಷ್ಟೇ ನಾನು ಸುರಕ್ಷಿತರಾಗಿದ್ದೇವೆಂಬ ಭಾವನೆ ಹುಟ್ಟತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT