ಬರ್ದಮನ್(ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಬುರ್ದ್ವಾನ್ ಜಿಲ್ಲೆಯ ಕಂಕ್ಸ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಮತ್ತಿಬ್ಬರು ಗಾಯಗೊಂಡಿದ್ದಾರೆ.
9 ಜನರನ್ನು ಹೊತ್ತು ಸಾಗುತ್ತಿದ್ದ ಮಾರುತಿ ವ್ಯಾನ್ ಆಲೂಗಡ್ಡೆ ತುಂಬಿಸಿಕೊಂಡು ಎದುರಿನಿಂದ ಬರುತ್ತಿದ್ದ ಟ್ರಕ್ಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬಿರ್ಬುಮ್ ಜಿಲ್ಲೆಯ ಪತರ್ಚಪುರಿ ಪ್ರದೇಶದಲ್ಲಿ ಜಾತ್ರೆಯೊಂದನ್ನು ವೀಕ್ಷಿಸಿ ಊರಿಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮತ್ತೆ ನಾಲ್ವರು ಪ್ರಯಾಣಿಕರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಟ್ರಕ್ ನ ಚಾಲಕ ನಾಪತ್ತೆಯಾಗಿದ್ದಾರೆ.