ಸಾಂದರ್ಭಿಕ ಚಿತ್ರ 
ದೇಶ

ತ್ರಿಪುರದಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಧರ್ಮಾನಗರದಲ್ಲಿ ನಡೆದಿದೆ....

ಅಗರತಾಲ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಧರ್ಮಾನಗರದಲ್ಲಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಕಳೆದ ಶನಿವಾರ ಸಂಜೆ 9ನೇ ತರಗತಿ ವಿದ್ಯಾರ್ಥಿನಿಗೆ ಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆ ಮಾಡಿ ಮನೆಗೆ ಕರೆಯಿಸಿಕೊಂಡಿದ್ದು, ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಕ್ ದಾಸ್ ಅವರು ಹೇಳಿದ್ದಾರೆ.
ನಗರದ ಲಿಂಕ್ ರಸ್ತೆಯಲ್ಲಿ ಯಾರೂ ಇಲ್ಲದ ಮನೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಆಕೆಯ ದೇಹದ ಮೇಲೆ ಹಲವು ಗಾಯಗಳಾಗಿವೆ ಎಂದು ದಾಸ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ನಿನ್ನೆ ರಜತ್ ತಂತಿ(22) ಎಂಬ ಯುವಕನನ್ನು ಬಂಧಿಸಿದ್ದು, ಆರೋಪಿ ತಾನು ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ

SIR ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಗೆ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು: ಸಿಎಂ ಶಿವಕುಮಾರ್ ಗೆ ಪ್ರಕಾಶ್ ರಾಜ್ ಮನವಿ

BBK 13: 'ಅಗ್ನಿಪರೀಕ್ಷೆ' ಸುತ್ತಿನಲ್ಲಿ ಸ್ಪರ್ಧಿಗಳಿಗೆ ಟಾರ್ಚರ್‌, ಭಾರಿ ಟ್ರೋಲ್, ಸಂಗೀತಾ ಸಮರ್ಥನೆ, ಜಿ.ಕೆ. ಪೂರ್ಣಿಮಾ ಮೊದಲ ‘ಸ್ಟಾರ್ ಕಂಟೆಸ್ಟೆಂಟ್’!