ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾ.27 ರಂದು ಲೋಕಸಭೆಯಲ್ಲಿ ಜಿಎಸ್ ಟಿಗೆ ಸಂಬಂಧಿಸಿದ 4 ಮಸೂದೆಗಳನ್ನು ಮಂಡಿಸಿದ್ದಾರೆ.
ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಮಸೂದೆ (ಸಿ.ಜಿ.ಎಸ್.ಟಿ) ಮಸೂದೆ 2017, ಏಕೀಕೃತ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಕೇಂದ್ರಾಡಳಿತ ಪ್ರದೇಶ ಸರಕು ಮತ್ತು ಸೇವಾ ತೆರಿಗೆ ಮಸೂದೆ-2017, ಜಿಎಸ್ ಟಿ ಮಸೂದೆ (ರಾಜ್ಯಗಳಿಗೆ ಪರಿಹಾರ ನೀಡುವ ಮಸೂದೆ)-2017 ಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಜಿಎಸ್ ಟಿ ಜಾರಿಯ (ಜುಲೈ.1 ರಿಂದ) ಒಳಗಾಗಿ ಈ ಮಸೂದೆಗಳನ್ನು ರಾಜ್ಯದ ವಿಧಾನಸಭೆಗಳಲ್ಲೂ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ.
ಜಿಎಸ್ ಟಿ ಜಾರಿಯಿಂದ ಆರ್ಥಿಕ ಬೆಳವಣಿಗೆ ಶೇ.0.5 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.