ಸುಪ್ರೀಂ ಕೋರ್ಟ್ 
ದೇಶ

ಕಾಶ್ಮೀರದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರೆ ಎಂಬ ಬಗ್ಗೆ ನಿರ್ಧರಿಸಿ: ಕೇಂದ್ರ, ರಾಜ್ಯಕ್ಕೆ ಸುಪ್ರೀಂ ಸೂಚನೆ

ಕಾಶ್ಮೀರದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರು ಎಂದು ಪರಿಗಣಿಸುವುದು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಕೇಂದ್ರ ಹಾಗೂ...

ನವದೆಹಲಿ: ಕಾಶ್ಮೀರದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರು ಎಂದು ಪರಿಗಣಿಸುವುದು ಸೇರಿದಂತೆ ಇತರೆ ವಿಷಯಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ 'ಒಟ್ಟಿಗೆ ಕುಳಿತು' ನಿರ್ಧರಿಸಿ ಎಂದು ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸೂಚಿಸಿದೆ.
ಇದು ತುಂಬಾ ಮಹತ್ವದ ವಿಷಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಕೂಳಿತು ಈ ಸಮಸ್ಯೆಯನ್ನು ಪರಿಹರಿಸಿ ನಮಗೆ ವರದಿ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್, ನ್ಯಾಯಮೂರ್ತಿಗಳಾದ ಚಂದ್ರಚೂಡ್ ಹಾಗೂ ಎಸ್.ಕೆ.ಕೌಲ್ ಅವರನ್ನೊಳಗೊಂಡ ಪೀಠ ಆದೇಶಿಸಿದೆ.
ಕಣಿವೆ ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ ಮುಸ್ಲಿಮರು ಅಲ್ಪಸಂಖ್ಯಾತರ ಲಾಭ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಸಾವರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಈ ಬಗ್ಗೆ ಉತ್ತರಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಳೆದ ತಿಂಗಳು 30 ಸಾವಿರ ರುಪಾಯಿ ದಂಡ ವಿಧಿಸಿತ್ತು. ಈ ಬಾರಿ ಕೇಂದ್ರ ಸರ್ಕಾರಕ್ಕೆ ಕೊನೆ ಅವಕಾಶ ನೀಡಿದ್ದು, ಇದೊಂದು ಮಹತ್ವದ ವಿಷಯ ಎಂದು ಎಚ್ಚರಿಸಿದೆ.
ಈ ಹಿಂದೆ ವಕೀಲ್ ಅಂಕೂರ್ ಶರ್ಮಾ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಕೋರ್ಟ್, ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ಅಲ್ಪ ಸಂಖ್ಯಾತ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್