ನರೇಂದ್ರ ಮೋದಿ- ಉದ್ಧವ್ ಠಾಕ್ರೆ 
ದೇಶ

ದೆಹಲಿಯ ಔತಣಕೂಟದಲ್ಲಿ ಬಗೆಹರಿಯುತ್ತಾ ಬಿಜೆಪಿ-ಶಿವಸೇನೆ ಭಿನ್ನಮತ?

ನವದೆಹಲಿಯಲ್ಲಿ ಆಯೋಜಿಸಲಾಗಿರುವ ಔತಣಕೂಟದಲ್ಲಿ ಭಾಗಿಯಾಗುವಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಮಂತ್ರಣ ನೀಡಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಆಯೋಜಿಸಲಾಗಿರುವ ಔತಣಕೂಟದಲ್ಲಿ ಭಾಗಿಯಾಗುವಂತೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಮಂತ್ರಣ ನೀಡಿದ್ದಾರೆ. ಮೇಲ್ನೋಟಕ್ಕೆ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎಗೆ ಬೆಂಬಲ ಪಡೆಯುವ ಯತ್ನವಾಗಿ ಕಾಣುತ್ತಿದ್ದರೂ, ಆಂತರಿಕವಾಗಿ ಶಿವಸೇನೆಯೊಂದಿಗಿನ ಮೈತ್ರಿಯಲ್ಲಿ ಉಂಟಾಗಿರುವ ಭಿನ್ನಮತ ಬಗೆಹರಿಸುವುದಕ್ಕೆ ಔತಣಕೂಟ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಮಾ.29 ರಂದು ನಡೆಯಲಿರುವ ಔತಣಕೂಟದಲ್ಲಿ ಎನ್ ಡಿಎ ಮೈತ್ರಿಕೂಟದ ಬಹುತೇಕ ಸದಸ್ಯ ಪಕ್ಷಗಳ ನಾಯಕರು ಔತಣಕೂಟದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವರೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ನೀಡಿರುವ ಆಮಂತ್ರಣಕ್ಕೆ ಶಿವಸೇನೆ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲವಾದರೂ, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಆಹ್ವಾನಿಸಿರುವುದರಿಂದ ಉದ್ಧವ್ ಠಾಕ್ರೆ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಸಾಮಾನ್ಯವಾಗಿ ಎನ್ ಡಿಎ ಸಭೆಗಳಲ್ಲಿ ಕೇಂದ್ರ ಸಚಿವ ಅನಂತ್ ಗೀತೆ, ಸಂಸದ ಸಂಜಯ್ ರಾವುತ್ ಶಿವಸೇನೆ ಪ್ರತಿನಿಧಿಗಳಾಗಿರುತ್ತಿದ್ದರು. ಆದರೆ ಮಾ.29 ರಂದು ಉದ್ಧವ್ ಠಾಕ್ರೆ ಭಾಗವಹಿಸುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಪ್ರದೇಶದ ವಿಧಾನಸಭೆಯನ್ನು ಗೆದ್ದ ನಂತರ ಪ್ರಧಾನಿ ನರೇಂದ್ರ ಮೋದಿ ತಂಡ ಈಗ ರಾಷ್ಟ್ರಪತಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದ್ದು, ಮಿತ್ರಪಕ್ಷ ಶಿವಸೇನೆಯನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ.  ರಾಷ್ಟ್ರಪತಿ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಶಿವಸೇನೆ ಎನ್ ಡಿಎ ಅಭ್ಯರ್ಥಿಗಳಿಗೆ ಬೆಂಬಲಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ