ನೈಜೀರಿಯ ವಿದ್ಯಾರ್ಥಿಗಳ ಮೇಲೆ ದಾಳಿ
ನೊಯ್ಡಾ: ಉತ್ತರಪ್ರದೇಶದ ನೊಯ್ಡಾದಲ್ಲಿ 4 ನೈಜೀರಿಯ ಮೂಲದ ಪ್ರಜೆಗಳ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಕೆಲ ದಿನಗಳ ಹಿಂದಷ್ಟೇ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದ. ಅತಿಯಾದ ಮಾದಕ ಸೇವನೆಯೇ ವಿದ್ಯಾರ್ಥಿ ಸಾವಿಗೆ ಕಾರಣ ಎಂದು ಹೇಳಲಾಗಿತ್ತು.
ಪ್ರಕರಣ ಸಂಬಂಧ ಐವರೂ ನೈಜಿರಿಯಾ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ನೈಜಿರಿಯ ಪ್ರಜೆಗಳನ್ನು ಬಂಧನಕ್ಕೊಳಪಡಿಸಿದ್ದರು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ನಂತರ ಬಿಡುಗಡೆ ಮಾಡಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ 100ಕ್ಕೂ ಹೆಚ್ಚು ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ನೊಯ್ಡಾದಲ್ಲಿ ನೆಲೆಸಿರುವ ಅಫ್ರಿಕಾ ಪ್ರಜೆಗಳನ್ನು ಕೂಡಲೇ ಮನೆಗಳನ್ನು ಖಾಲಿ ಮಾಡುವಂತೆ ಆಗ್ರಹಿಸಿದ್ದರು.
ಈ ಪ್ರತಿಭಟನೆ ಇದ್ದಕ್ಕಿದ್ದಂತೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ನೈಜಿರಿಯಾ ವಿದ್ಯಾರ್ಥಿಗಳ ಮೇಲೆ ಜನರು ದಾಳಿ ಮಾಡಿದ್ದರು.
ಹಿಂಸಾಚಾರವನ್ನು ಹತ್ತಿಕ್ಕುವ ಸಲುವಾಗಿ ನಿನ್ನೆ ಸಂಜೆ ಸ್ಥಳದಲ್ಲಿ ಲಾಠಿಚಾರ್ಜ್ ಮಾಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ನೈಜಿರಿಯ ವಿದ್ಯಾರ್ಥಿಗಲನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics