ಹಲ್ಲೆಗೊಳಗಾದ ನೈಜೀರಿಯಾ ವಿದ್ಯಾರ್ಥಿ 
ದೇಶ

ನೈಜೀರಿಯಾ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಭಾರತೀಯ ರಾಯಭಾರಿಗೆ ಸಮನ್ಸ್, ಸೂಕ್ತ ಕ್ರಮಕ್ಕೆ ಆಗ್ರಹ

ಭಾರತದಲ್ಲಿರುವ ನೈಜೀರಿಯಾದ 4 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿಗೆ ನೈಜೀರಿಯಾ ಸಮನ್ಸ್ ನೀಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ

ಅಬುಜಾ: ಭಾರತದಲ್ಲಿರುವ ನೈಜೀರಿಯಾದ 4 ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿಗೆ ನೈಜೀರಿಯಾ ಸಮನ್ಸ್ ನೀಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. 
ಭಾರತ ಸರ್ಕಾರ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೈಜೀರಿಯಾದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಭಾರತದ ರಾಯಭಾರಿ ನಾಗಭೂಷಣ್ ರೆಡ್ಡಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಒತ್ತಾಯಿಸಿದ್ದಾರೆ. ಇತ್ತೀಚೆಗಷ್ಟೇ ಡ್ರಗ್ ನ ಓವರ್ ಡೋಸ್ ನಿಂದಾಗಿ ಗ್ರೇಟರ್ ನೋಯ್ಡಾದಲ್ಲಿ 17 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದ, ಈ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಕ್ಯಾಂಡಲ್ ಲೈಟ್ ಮಾರ್ಚ್ ನಲ್ಲಿ ನೈಜೀರಿಯಾ ಮೂಲದ ವಿದ್ಯಾರ್ಥಿಗಳನ್ನು ಥಳಿಸಲಾಗಿತ್ತು.   
ವಿದೇಶಿಗರು ತಮ್ಮ ಮಗನನ್ನು ಅಪಹರಿಸಿ ಡ್ರಗ್ಸ್ ನೀಡಿದ್ದರು, ಇದರಿಂದಾಗಿಯೇ ತಮ್ಮ ಮಗ ಮೃತಪಟ್ಟಿದ್ದು ಎಂದು ಬಾಲಕನ ಪೋಷಕರು ಆರೋಪಿಸಿದ್ದರು. ಈ ಘಟನೆಗೆ ನೈಜೀರಿಯಾ ಮೂಲದ ವ್ಯಕ್ತಿಗಳೇ ಕಾರಣ ಎಂದು ಭಾವಿಸಿದ್ದ ಜನರು ನೈಜೀರಿಯಾ ಮೂಲದ 4 ವಿದ್ಯಾರ್ಥಿಗಳನ್ನು ಥಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ