ದೇಶ

25 ವರ್ಷಕ್ಕಿಂತ ಮೇಲ್ಪಟ್ಟವರು ನೀಟ್ ಪರೀಕ್ಷೆ ಬರೆಯಬಹುದು: ಸುಪ್ರೀಂ ಕೋರ್ಟ್

Sumana Upadhyaya
ನವದೆಹಲಿ: ಹಲವು ಪದವಿ ಕೋರ್ಸ್ ಗಳ ಪ್ರವೇಶಕ್ಕೆ 25 ವರ್ಷಕ್ಕಿಂತ ಮೇಲ್ಪಟ್ಟವರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಬರೆಯಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ಸುಪ್ರೀಂ ಕೋರ್ಟ್ ಏಪ್ರಿಲ್ 5ಕ್ಕೆ ಮುಂದೂಡಿದೆ.
ನೀಟ್ 1 ಪರೀಕ್ಷೆಗಿಂತ ನೀಟ್ 2 ಕ್ಲಿಷ್ಟವಾಗಿದ್ದು, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾದ ಎರಡು ಪರೀಕ್ಷೆಗಳ ಫಲಿತಾಂಶವನ್ನು ಸಾಮಾನ್ಯ "ಅಥವಾ" ತರ್ಕಬದ್ಧ ಎಂದು ಪ್ರತ್ಯೇಕವಾಗಿ ನೀಡುವ ಬದಲು ಸಾಮಾನ್ಯ ಫಲಿತಾಂಶ ಪ್ರಕಟಿಸಿತ್ತು ಎಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.
ಈ ಮಧ್ಯೆ, ಅಲಹಾಬಾದ್ ಹೈಕೋರ್ಟ್ ನ ಇಬ್ಬ ರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಸಲ್ಲಿಸಿದ್ದ ಅಫಿಡವಿಟ್ಟಿನ ವಿಚಾರಣೆ ನಡೆಸಿತು.
ನೀಟ್ ಪರೀಕ್ಷೆ ಬರೆಯಲು ಗರಿಷ್ಠ 25 ವರ್ಷ ಮಿತಿ ಹೇರಿರುವುದಕ್ಕೆ ಸ್ಪಷ್ಟನೆ ನೀಡಬೇಕೆಂದು ಹೈಕೋರ್ಟ್ ಫೆಬ್ರವರಿ 15ರಂದು ಭಾರತೀಯ ವೈದ್ಯಕೀಯ ಮಂಡಳಿ, ಸಿಬಿಎಸ್ಇ ಮತ್ತು ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.
SCROLL FOR NEXT