ಸಂಗ್ರಹ ಚಿತ್ರ 
ದೇಶ

ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಪ್ರೇರಿತರಾಗಬೇಡಿ: ಕಾಶ್ಮೀರಿ ಯುವಕರಿಗೆ ರಾಜನಾಥ್ ಸಿಂಗ್ ಸಲಹೆ

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ತಮ್ಮ ಚಟುವಟಿಕೆಗಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದ ಕಾಶ್ಮೀರದ ಯುವಕರು ಪ್ರಭಾವಿತರಾಗಬಾರದು ಎಂದು ಕೇಂದ್ರ ಗೃಹ ಸಚಿವ  ರಾಜನಾಥ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಕಾಶ್ಮೀರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು, ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯಭೀತಿ  ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ರಾಜ್ಯವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು, ಅವರಿಗೆ ನಾವು ಸರಿಯಾದ ರೀತಿಯಲ್ಲಿಯೇ ಉತ್ತರವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

"ಭದ್ರತಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವಾಗ ಆವರ ಮೇಲೆ ಕಲ್ಲು ತೂರಾಟ ನಡೆಸುವುದು ಇತ್ತೀಚೆಗೆ ಹೊಸ ಟ್ರೆಂಡ್ ಆಗಿ ಹೋಗಿದೆ. ಕಲ್ಲು ತೂರಾಟ ನಡೆಸುವವರು ಪಾಕಿಸ್ತಾನ ಪಡೆಗಳ ಕಡೆಗೆ  ಪ್ರಭಾವಿತರಾಗಿದ್ದಾರೆ. ಇಂತರರ ಪ್ರಭಾವಕ್ಕೆ ಒಳಗಾಗದಂತೆ ನಾನು ಈ ಮೂಲಕ ಕಾಶ್ಮೀರಿ ಯುವಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಜನರನ್ನು ಒಗ್ಗೂಡಿಸಲು ಪಾಕಿಸ್ತಾನದ ಭಯೋತ್ಪಾದಕರು ಸಾಮಾಜಿಕ ಜಾಲತಾಣಗಳನ್ನು  ಬಳಕೆ ಮಾಡುತ್ತಿದ್ದಾರೆ. ಭಯೋತ್ಪಾದನೆಯನ್ನು ಮಟ್ಟಹಾಕುವಲ್ಲಿ ಭಾರತ ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು, ಪಾಕಿಸ್ತಾನದ ಕಾಶ್ಮೀರ ಯುವಕರನ್ನು ತನ್ನ ಪ್ರಭಾವಕ್ಕೊಳಗಾಗುವಂತೆ ಮಾಡುತ್ತಿದ್ದು, ಎನ್ ಕೌಂಟರ್ ಸ್ಥಳದಲ್ಲಿ ಕಲ್ಲು ತೂರಾಟ  ನಡೆಯುವಂತೆ ಮಾಡುತ್ತಿದೆ. ಜನರು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ಕಾಶ್ಮೀರ ಹಾಗೂ ದೇಶದ ಶಾಂತಿ ಹಳಸು ಮಾಡುತ್ತಿದೆ ಎಂದು ಹೇಳಿದ್ದರು.

ಎನ್ ಕೌಂಟರ್ ಆರಂಭವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗತೊಡಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಪಡೆದುಕೊಳ್ಳುವ ಕಾಶ್ಮೀರ ಯುವಕರು ಸ್ಥಳಕ್ಕೆ ಬಂದು ಉಗ್ರರು  ತಪ್ಪಿಸಿಕೊಳ್ಳುವ ಸಲುವಾಗಿ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಾರೆ. ಈ ಬಗ್ಗೆ ನಾವು ಪರಿಶೀಲನೆ ನಡೆಸಿದ್ದು, ಇಂತಹ ಸಾಕಷ್ಟು ನೆಟ್ ವರ್ಕ್ ಗಳು ಪಾಕಿಸ್ತಾನದಲ್ಲಿರುವುದಾಗಿ ಪತ್ತೆಯಾಗಿವೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT