ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ 
ದೇಶ

ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ, ನನ್ನ ವಿರುದ್ಧದ ಆರೋಪಗಳು ಪೂರ್ವ ನಿಯೋಜಿತವಾದದ್ದು: ಸಿಎಂ ವೀರಭದ್ರ ಸಿಂಗ್

ನನ್ನ ವಿರುದ್ಧದ ಆರೋಪಗಳು ಪೂರ್ವನಿಯೋಜಿತ ಆರೋಪಗಳಾಗಿದ್ದು, ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್...

ಹಮಿರ್ಪುರ: ನನ್ನ ವಿರುದ್ಧದ ಆರೋಪಗಳು ಪೂರ್ವನಿಯೋಜಿತ ಆರೋಪಗಳಾಗಿದ್ದು, ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ನಿನ್ನೆಯಷ್ಟೇ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಸಿಂಗ್ ವಿರುದ್ದ ವಿಚಾರಣೆ ಹಾಗೂ ಬಂಧನಕ್ಕೆ ತಡೆ ನೀಡಲು ನಿರಾಕರಿಸಿತ್ತು. ಈ ಮೂಲಕ ಸಿಬಿಐ ಆಧಿಕಾರಿಗಳಿಗೆ ಸುಗಮ ಹಾದಿಯನ್ನು ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಇಂದು ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೀರಭದ್ರ ಸಿಂಗ್ ಅವರು, ಬಿಜೆಪಿ ಪಕ್ಷ ಹಾಗೂ ನಾಯಕರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಹೋರಾಟ ಆರಂಭವಾಗಿದೆ. ಶೀಘ್ರದಲ್ಲಿಯೇ ಸತ್ಯಾಂಶ ಹೊರಬರಲಿದೆ. ನನ್ನ ವಿರುದ್ಧವಿರುವ ಎಲ್ಲಾ ಆರೋಪಗಳು ಪೂರ್ವನಿಯೋಜಿತವಾದದ್ದು. ಪ್ರೇಮ್ ಕುಮಾರ್ ಮತ್ತು ಅನುರಾಗ್ ಠಾಕೂರ್ ರಂತಹ ಬಿಜೆಪಿ ನಾಯಕರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶಗಳಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel