ನವದೆಹಲಿ: 110 ನೇ ವಸಂತಕ್ಕೆ ಕಾಲಿಟ್ಟಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಟ್ವಿಟರ್ ನಲ್ಲಿ ಜನ್ಮದಿನದ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಶಿವಕುಮಾರ ಸ್ವಾಮಿಗಳ ಸಮಾಜ ಸೇವೆ ಅನೇಕ ಜೀವಗಳಿಗೆ ಸಕಾರಾತ್ಮಕವಾಗಿ ಪರಿಣಾಮ ಬೀರಿದೆ, ಪೂಜ್ಯ ಸ್ವಾಮಿಗಳಿಗೆ ಜನ್ಮದಿನದ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಏ.1 ರಂದು ಶಿವಕುಮಾರ ಸ್ವಾಮಿಗಳು 110 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಭಕ್ತ ಸಮೂಹ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಗುರು ವಂದನೆಯಲ್ಲಿ ಭಾಗವಹಿಸಿ ಗುರುಗಳಿಗೆ ನಮನ ಸಲ್ಲಿಸುತ್ತಿದ್ದಾರೆ.