ರಮಣ್ ಸಿಂಗ್ 
ದೇಶ

ಗೋಹತ್ಯೆ ಮಾಡಿದವರನ್ನು ನೇಣಿಗೆ ಹಾಕುತ್ತೇವೆ: ಛತ್ತೀಸ್ ಗಢ ಸಿಎಂ ರಮಣ್ ಸಿಂಗ್

ನಿನ್ನೆಯಷ್ಟೆ ಗುಜರಾತ್ ನಲ್ಲಿ ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಹೊಸ ಕಾನೂನು ಜಾರಿಗೆ ತರಲಾಗಿದೆ...

ರಾಯ್ ಪುರ: ನಿನ್ನೆಯಷ್ಟೆ ಗುಜರಾತ್ ನಲ್ಲಿ ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಹೊಸ ಕಾನೂನು ಜಾರಿಗೆ ತರಲಾಗಿದೆ. ಇದರ ಬೆನ್ನಲ್ಲೇ ಗೋಹತ್ಯೆ ಮಾಡಿದವರನ್ನು ಗಲ್ಲಿಗೇರಿಸುವುದಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.
ಗೋಹತ್ಯೆ ತಡೆಯಲು ಛತ್ತೀಸ್ ಗಢದಲ್ಲೂ ಹೊಸ ಕಾನೂನು ಜಾರಿಗೆ ತರುತ್ತೀರಾ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ರಮಣ್ ಸಿಂಗ್, ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಅಂತಹ ಯಾವುದೇ ಪ್ರಕರಣ ನಡೆದಿಲ್ಲ ಮತ್ತು ಮುಂದೆಯೂ ನಡೆಯುವುದಿಲ್ಲ ಅಂತ ಭಾವಿಸಿದ್ದೇನೆ. ಒಂದು ವೇಳೆ ಗೋಹತ್ಯೆ ನಡೆದರೆ ಹತ್ಯೆ ಮಾಡಿದವರನ್ನು ನೇಣಿಗೆ ಹಾಕುತ್ತೇವೆ ಎಂದರು.
ಛತ್ತೀಸ್ ಗಢದಲ್ಲಿ ಈಗಾಗಲೇ ಗೋಹತ್ಯೆ ನಿಷೇಧಿಸಲಾಗಿದ್ದು, ಕಾನೂನು ಉಲ್ಲಂಘಿಸಿದರೆ 7 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರುಪಾಯಿ ದಂಡ ವಿಧಿಸಲಾಗುತ್ತಿದೆ ಎಂದು ಛತ್ತೀಸ್ ಗಢ ಸರ್ಕಾರದ ವಕ್ತಾರರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
ಗುಜರಾತ್ ನಲ್ಲಿ 2011ರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ಡುಪಡಿ ತರಲಾಗಿದ್ದು, ಹೊಸ ಕಾನೂನಿನ ಪ್ರಕಾರ ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ದಂಡದ ಮೊತ್ತವನ್ನು 1 ಲಕ್ಷ ರು.ನಿಂದ 5 ಲಕ್ಷ ರುಪಾಯಿಗೆ ಏರಿಸಲಾಗಿದೆ. ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅಲ್ಲಿ ಗೋಹತ್ಯೆ ನಿಷೇಧಿಸಲಾಗಿತ್ತು.
ಇನ್ನು ಉತ್ತರ ಪ್ರದೇಶದಲ್ಲೂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಕ್ರಮ ಕಸಾಯಿಖಾನೆಗಳಿಗೆ ಕಡಿವಾಣ ಹಾಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!