ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ನವದೆಹಲಿ: ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನಲೆಯಲ್ಲಿ ದೇಶದ ಆಂತರಿಕ ಭದ್ರತೆಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಅವಲೋಕಿಸಿಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಡಿಐಬಿ ನಿರ್ದೇಶಕ ರಾಜೀವ್ ಜೈನ್ ಮತ್ತು ರಾ ಮುಖ್ಯಸ್ಥ ಅನಿಲ್ ಧಸ್ಮಾನಾ ಸೇರಿದಂತೆ ಉನ್ನತ ಭದ್ರತಾಧಿಕಾರಿಗಳೊಂದಿಗೆ ರಾಜನಾಥ ಸಿಂಗ್ ಅವರು ದೆಹಲಿಯಲ್ಲಿ ಎಂದು ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.
ಶ್ರೀನಗರ ಲೋಕಸಭಾ ಚುನಾವಣೆ ಬಳಿಕ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿತ್ತು. ಈ ವಿಚಾರದ ಕುರಿತಂತೆಯೂ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆಂದು ಮೂಲಗಳಿ ತಿಳಿಸಿವೆ.
ಸೋಮವಾರ ಭಾರತದ ಭೂಪ್ರದೇಶಕ್ಕೆ ನುಗ್ಗಿ ಅಪ್ರಚೋದಿತ ದಾಳಿ ನಡೆಸಿದ್ದ ಪಾಕಿಸ್ತಾನ ಸೇನೆ, ಜಮ್ಮುವಿನಲ್ಲಿ ಇಬ್ಬರು ಯೋಧರ ಅಂಗಾಂಗಗಳನ್ನು ಕತ್ತರಿಸಿ ಪೈಶಾಚಿಕ ಕೃತ್ಯವೆಸಗಿತ್ತು. ಪಾಕಿಸ್ತಾನ ಈ ವರ್ತನೆಗೆ ಇಡೀ ದೇಶದಾದ್ಯಂತ ಆಕ್ರೋಶಗಳು ವ್ಯಕ್ತವಾಗತೊಡಗಿವೆ.