ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ
ನವದೆಹಲಿ: ಅಂಗವೈಕಲ್ಯ ಪಿಂಚಣಿ ವಿತರಣೆಯಲ್ಲಿ ಹೊಸ ವ್ಯವಸ್ಥೆ ಅಳಾವಡಿಸಿಕೊಳ್ಳುವ 7 ನೇ ವೇತನ ಆಯೋಗದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಬದಿಗಿರಿಸಿದ್ದು, ಈ ಹಿಂದಿನ ವ್ಯವಸ್ಥೆಯನ್ನೇ ಮುಂದುವರೆಸಲು ತೀರ್ಮಾನಿಸಿದೆ.
ಪಿಂಚಣಿ, ಪಿಂಚಣಿಯ ಹೆಚ್ಚಳದಲ್ಲಿ ಶೇಕಡಾವಾರು ಆಧಾರಿತ ವ್ಯವಸ್ಥೆಯನ್ನೇ ಮುಂದುವರೆಸಬೇಕೆಂಬ ಸೇನಾ ಸಿಬ್ಬಂದಿಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ. 7 ನೇ ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ಅಂಗವೈಕಲ್ಯ ಪಿಂಚಣಿ ವಿತರಣೆಯಲ್ಲಿ ಸ್ಲ್ಯಾಬ್ ಆಧಾರಿತ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕೆಂದು 7 ನೇ ವೇತನ ಆಯೋಗ ಶಿಫಾರಸ್ಸು ಮಾಡಿತ್ತು.
ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಳೆಯ ವ್ಯವಸ್ಥೆಯನ್ನೇ ಮುಂದುವರೆಸಲು ತೀರ್ಮಾನಿಸಲಾಗಿದೆ. ಅಷ್ಟೇ ಅಲ್ಲದೇ ಸೇನಾ ಪಡೆಗಳ ಮೂರು ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನೂ ನೀಡಲಾಗಿದೆ.
ಸಭೆಯ ನಂತರ ಮಾತನಾಡಿರುವ ರಕ್ಷಣಾ ಸಚಿವ ಅರುಣ್ ಜೇಟ್ಲಿ, ವೇತನ ಮ್ಯಾಟ್ರಿಕ್ಸ್ ನ್ನು 24 ರಿಂದ 40 ವರ್ಷಕ್ಕೆ ವಿಸ್ತರಿಸುವ ಬಗ್ಗೆಯೂ ಕೇಂದ್ರ ಸರ್ಕಾರ ಗಮನ ಹರಿಸುತ್ತಿದ್ದು, ಲೆಫ್ಟಿನೆಂಟ್ ಕರ್ನಲ್ ಹಾಗೂ ಕರ್ನಲ್ ಗಳ ವೇತನವನ್ನು ಕ್ರಮಬದ್ಧಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ 2016 ಕ್ಕಿಂತ ಮುನ್ನ ಪಿಂಚಣಿ ಪಡೆಯುತ್ತಿದ್ದ 55 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics