ಸುಪ್ರೀಂ ಕೋರ್ಟ್ 
ದೇಶ

ಗಾಯತ್ರಿ ಪ್ರಜಾಪತಿ ಅತ್ಯಾಚಾರ ಕೇಸು: ಇಬ್ಬರು ಸಹ ಆರೋಪಿಗಳಿಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶ

ಗಾಯತ್ರಿ ಪ್ರಜಾಪತಿ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಇನ್ನೆರಡು ದಿನಗಳೊಳಗೆ...

ನವದೆಹಲಿ: ಗಾಯತ್ರಿ ಪ್ರಜಾಪತಿ ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಇನ್ನೆರಡು ದಿನಗಳೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ವಿಕಾಸ್ ವರ್ಮ ಮತ್ತು ಅಮರಿಂದರ್ ಸಿಂಗ್ ಗೆ ಸೂಚಿಸಿದ್ದಾರೆ.

ಪ್ರಜಾಪತಿ ಮತ್ತು ಇಬ್ಬರು ಆರೋಪಿಗಳಿಗೆ ತ್ವರಿತ ನ್ಯಾಯಾಲಯ ಈ ಮುನ್ನ ಜಾಮೀನು ನೀಡಿತ್ತು. ಆದರೂ ಅಲಹಾಬಾದ್ ಹೈಕೋರ್ಟ್ ಅವರ ಜಾಮೀನು ಆದೇಶವನ್ನು ವಜಾ ಮಾಡಿತ್ತು. ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯಿಂದ ಲಕ್ನೋದ ಆಶಿಯಾನಾ ಪ್ರದೇಶದಲ್ಲಿ ಗಾಯತ್ರಿ ಪ್ರಜಾಪತಿ ಮಾರ್ಚ್ 15ರಂದು ಬಂಧಿತರಾಗಿದ್ದರು. 

ಬಾಲಕಿಯ ತಾಯಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದ ಸಮಾಜವಾದಿ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪ್ರಜಾಪತಿ ಸುಮಾರು ಒಂದು ತಿಂಗಳ ಕಾಲ ತನ್ನ ಬಂಧನವನ್ನು ತಪ್ಪಿಸಿಕೊಂಡದ್ದರು. 

ಕಳೆದ ಫೆಬ್ರವರಿಯಲ್ಲಿ ಪ್ರಜಾಪತಿ ಮತ್ತು 6 ಮಂದಿ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದಂತೆ ಪೊಲೀಸ್ ದೂರು ನೀಡಲಾಗಿತ್ತು. ಉತ್ತರ ಪ್ರದೇಶ ಪೊಲೀಸರು ಈ ಏಳೂ ಜನರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!