ಜಾರ್ಖಂಡ್: ನಕ್ಸಲರ ಅಡಗು ತಾಣಗಳ ಮೇಲೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ
ಲೊಹಾರ್ಡಾಗಾ: ಜಾರ್ಖಂಡ್ ರಾಜ್ಯದ ಲೊಹಾರ್ಡಾಗಾ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗು ತಾಣಗಳ ಮೇಲೆ ಸೇನಾ ಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಗುರುವಾರ ತಿಳಿದುಬಂದಿದೆ.
ಖಚಿತ ಮಾಹಿತಿ ಆಧಾರದ ಮೇಲೆಗೆ 158 ಬೆಟಾಲಿಯನ್ ಸಿಆರ್ ಪಿಎಫ್ ಪಡೆ ಹಾಗೂ ಜಾರ್ಖಂಡ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗಿಳಿಸಿದ್ದರು. ಈ ವೇಳೆ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳು ದೊರತಿವೆ ಎಂದು ಮೂಲಗಳು ತಿಳಿಸಿವೆ.
ದಾಳಿ ವೇಳೆ 7.62 ಎಂಎಂ ಲೈಟ್ ಮಷಿನ್ ಗನ್, ವಿದೇಶಿ ನಿರ್ಮಾಣದ ಶಸ್ತ್ರಾಸ್ತ್ರಗಳು, 1 ಎಕೆ-47, ಸೆಲ್ಪ್ ಲೋಡಿಂಗ್ ರೈಫಲ್ ಗಳು, 3 ಇನ್ಸಾಸ್ ರೈಫಲ್ ಗಳು, 2 303 ರೈಫಲ್ ಗಳು, ಕಮ್ಯುನಿಕೇಷನ್ ಸೆಟ್ ಗಳು ಹಾಗೂ ನಿಯತಕಾಲಿಕೆಗಳು ಸೇರಿದಂತೆ 300 ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ನಕ್ಸಲು ಸಿಆರ್ ಪಿಎಫ್ ಯೋಧರ ಮೇಲೆ ಭೀಕರ ದಾಳಿ ನಡೆಸಿದ್ದರು. ಛತ್ತೀಸ್ಘಡದ ಸುಕ್ಮಾದ ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರಿಗೆ 75 ಬೆಟಾಲಿಯನ್ ಪಡೆ ಭದ್ರತೆ ಒದಗಿಸುತ್ತಿದ್ದ ವೇಳೆ, ಸ್ಥಳಕ್ಕೆ ಬಂದಿದ್ದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ದಾಳಿ ನಡೆಸಿದ್ದರು. ಘಟನೆಯಲ್ಲಿ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಅಲ್ಲದೆ, ಹಲವು ಯೋಧರಿಗೆ ಗಂಭೀರವಾದ ಗಾಯಗಳಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics