ಕಾಶ್ಮೀರ ಭಾರತ-ಪಾಕ್ ನಡುವಿನ ವಿವಾದ, ಮಧ್ಯಸ್ಥಿಕೆ, ಹಸ್ತಕ್ಷೇಪ ಮಾಡುವುದಿಲ್ಲ: ಚೀನಾ
ತನ್ನ ವರಸೆ ಬದಲಿಸಿಕೊಂಡಿರುವ ಚೀನಾ, ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎನ್ನಲು ಪ್ರಾರಂಭಿಸಿದೆ.
ಬೀಜಿಂಗ್: ಕಾಶ್ಮೀರ ವಿವಾದ ಬಗೆಹರಿಸುವಲ್ಲಿ ಚೀನಾ ಈಗ ತನ್ನ ಹಿತಾಸಕ್ತಿಯನ್ನು ಹೊಂದಿದೆ ಎಂದು ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ ಗ್ಲೋಬಲ್ ಟೈಮ್ಸ್ ಹೇಳಿದ್ದ ಬೆನ್ನಲ್ಲೇ ತನ್ನ ವರಸೆ ಬದಲಿಸಿಕೊಂಡಿರುವ ಚೀನಾ, ಕಾಶ್ಮೀರ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎನ್ನಲು ಪ್ರಾರಂಭಿಸಿದೆ.
ಕಾಶ್ಮೀರ ವಿವಾದ ಭಾರತ-ಪಾಕಿಸ್ತಾನ ನಡುವಿನ ವಿವಾದವಾಗಿದ್ದು, ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಚೀನಾ ಹೇಳಿದ್ದು, ಸಿಪಿಇಸಿಗಾಗಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ಬದಲಾವಣೆ ಮಾಡಿಕೊಳ್ಳುವುದಿಲ್ಲ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿದ್ದಾರೆ.
ಕಾಶ್ಮೀರದ ವಿಷಯವಾಗಿ ಚೀನಾದ ನಿಲುವು ಸ್ಥಿರ ಹಾಗೂ ಸ್ಪಷ್ಟವಾಗಿದೆ. ಕಾಶ್ಮೀರ ವಿವಾದ ಭಾರತ-ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯವಾಗಿದೆ. ಅದನ್ನು ಭಾರತ-ಪಾಕಿಸ್ತಾನ ಮಾತ್ರ ಬಗೆಹರಿಸಿಕೊಳ್ಳಬೇಕಿದೆ ಎಂದು ಚೀನಾ ವಿದೇಶಾಂಗ ಸಚಿವರು ಹೇಳಿಕೆ ನೀಡಿದ್ದಾರೆ.
ಪಾಕಿಸ್ತಾನ-ಭಾರತ ನಡುವೆ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರಾಷ್ಟ್ರಗಳು ಮಧ್ಯಸ್ಥಿಕೆ ವಹಿಸುವುದಕ್ಕೆ ಭಾರತ ವಿರೋಧ ವ್ಯಕ್ತಪಡಿಸುತ್ತಿದೆ. ಆದರೆ ಕಳೆದ ವಾರ ಚೀನಾದ ಸರ್ಕಾರಿ ಸ್ವಾಮ್ಯದ ಪತ್ರಿಕೆ ಕಾಶ್ಮೀರ ವಿವಾದವನ್ನು ಬಗೆಹರಿಸುವಲ್ಲಿ ಚೀನಾ ತನ್ನ ಹಿತಾಸಕ್ತಿ ಹೊಂದಿದೆ ಎಂದು ಹೇಳಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.