ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಚಾಲನೆ ವೇಳೆ ನಿದ್ರೆಗೆ ಜಾರಿದ ಚಾಲಕ, 14 ಜನರ ದುರ್ಮರಣ

ಉತ್ತರಪ್ರದೇಶ ಇತಾಹ್'ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಚಾಲನೆ ವೇಳೆ ಚಾಲಕ ನಿದ್ರೆಗೆ ಜಾರಿದ ಪರಿಣಾಮ 14 ಮಂದಿ ದುರ್ಮರಣವನ್ನಪ್ಪಿ, 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ...

ಸಾಂದರ್ಭಿಕ ಚಿತ್ರ
Manjula VN
Updated On : 5 May 2017, 2:03 am
ಲಖನೌ: ಉತ್ತರಪ್ರದೇಶ ಇತಾಹ್'ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಚಾಲನೆ ವೇಳೆ ಚಾಲಕ ನಿದ್ರೆಗೆ ಜಾರಿದ ಪರಿಣಾಮ 14 ಮಂದಿ ದುರ್ಮರಣವನ್ನಪ್ಪಿ, 24ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. 
ಆರತಕ್ಷತೆಗಾಗಿ ಕುಟುಂಬವೊಂದು ಮಿನಿ ಬಸ್ ವೊಂದನ್ನು ನೇಮಿಸಿತ್ತು. ಸಮಾರಂಭ ಮುಗಿಸಿಕೊಂಡು ಕುಟುಂಬಸ್ಥರು ಮಿನಿ ಬಸ್ ನಲ್ಲಿ ಸಕ್ರೌಲಿ ಗ್ರಾಮದಿಂದ ಆಗ್ರಾಗೆ ಬರುತ್ತಿದ್ದರು. 
ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆಗೆ ಜಾರಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ವಿಭಜಕಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ 14 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 

Advertisement

Advertisement

ಸುದ್ದಿ ತಿಳಿಯುತ್ತಿದ್ದಂತೆಯೇ ಡಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಹಿರಿಯ ಆಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. 
ಮೃತ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ
ದುರ್ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತ ಕುಟುಂಬಕ್ಕೆ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ನೀಡುವುದಾಗಿ ಮೋದಿಯವರು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement