ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನಿಸಿದ್ದ 12ರ ಬಾಲಕ ಸೇನಾ ವಶಕ್ಕೆ

ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲದ 12 ವರ್ಷದ ಬಾಲಕನೊಬ್ಬನನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಶುಕ್ರವಾರ...

ರಜೌರಿ: ಭಾರತದ ಗಡಿ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮೂಲದ 12 ವರ್ಷದ ಬಾಲಕನೊಬ್ಬನನ್ನು ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್'ನ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಿನ್ನೆ ಸಂಜೆ ಬಾಲಕ ಗಡಿ ನುಸುಳಲು ಯತ್ನಿಸುತ್ತಿದ್ದ. ಈ ವೇಳೆ ಭಾರತೀಯ ಸೇನೆ ವಶಕ್ಕೆ ಪಡೆದುಕೊಂಡಿದೆ ವರದಿಗಳು ತಿಳಿಸಿವೆ. 
ಬಲೂಚಿಸ್ತಾನದ ಯೋಧ ಹುಸೇನ್ ಮಿಲ್ ಅವರ ಪುತ್ರ ಅಶ್ಫಕ್ ಅಲಿ ಚೌಹಾಣ್ ಬಂಧಿತ ಬಾಲಕನಾಗಿದ್ದಾನೆ. ಗಡಿ ನುಸುಳುತ್ತಿದ್ದ ವೇಳೆ ಸೇನಾ ಪಡೆ ಸೂಚನೆ ನೀಡಿದೆ. ನಂತರ ಬಾಲಕ ಸೇನಾಪಡೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ. 
ಬಾಲಕ ಗಡಿ ನುಸುಳುವಂತೆ ಉಗ್ರರು ಸೂಚನೆ ನೀಡಿದ್ದು, ಉಗ್ರರ ಸೂಚನೆಯಂತೆ ಬಾಲಕ ಗಡಿ ನುಸುಳಲು ಯತ್ನಿಸಿದ್ದಾನೆಂದು ಮೂಲಗಳು ತಿಳಿಸಿವೆ. ಪ್ರಸ್ತುತ ಬಾಲಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ ವಶಕ್ಕೆ ನೀಡಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ