ಸಂಗ್ರಹ ಚಿತ್ರ 
ದೇಶ

ಹಂದ್ವಾರ, ಪುಲ್ವಾಮದಲ್ಲಿ ಭದ್ರತಾ ಪಡೆ, ವಿದ್ಯಾರ್ಥಿಗಳ ನಡುವೆ ಘರ್ಷಣೆ: ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಹಂದ್ವಾ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಭದ್ರತಾ ಪಡೆ ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಹಲವರಿಗೆ ಗಾಯವಾಗಿರುವುದಾಗಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಭದ್ರತಾ ಪಡೆ ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಹಲವರಿಗೆ ಗಾಯವಾಗಿರುವುದಾಗಿ ಶನಿವಾರ ತಿಳಿದುಬಂದಿದೆ. 
ಕಾಶ್ಮೀರದ ಹಲವೆಡೆ ಉನ್ನತ ಮಟ್ಟದ ಭದ್ರತೆಯನ್ನು ನಿಯೋಜಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ವಿದ್ಯಾರ್ಥಿಗಳು ಪುಲ್ವಾಮ, ಹಂದ್ವಾರದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. 
ಈ ವೇಳೆ ಪ್ರತಿಭಟನಾ ಸ್ಥಳದಿಂದ ಹಿಂದಕ್ಕೆ ಹೋಗುವಂತೆ ಭದ್ರತಾ ಪಡೆಗಳು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳ ಮೇಲೆ ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದು, ಘರ್ಷಣೆ ಏರ್ಪಟ್ಟಿದೆ. ಘರ್ಷಣೆ ವೇಳೆ ಹಲವರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ. ಪ್ರತಿಭಟನೆ ಹತ್ತಿಕ್ಕಲು ಅಶ್ರುವಾಯು ಪ್ರಯೋಗ ಮಾಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!