ಮುಂಬೈ: ಆತ್ಮಹತ್ಯೆ ಮಾಡಿಕೊಂಡ ಯುವಕನೊಬ್ಬ ತನ್ನ ಜೀವನದ ಕೊನೆಯ ಕ್ಷಣಗಳನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದ ಬೆನ್ನಲ್ಲೇ ಇಂಥಹದ್ದೇ ಘಟನೆಯೊಂದು ಮರುಕಳಿಸಿದೆ. ಆದರೆ ಪೊಲೀಸರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಪ್ರಿಯಾಂಕ ಜೆಥಾಲಾಲ್ ಮರು ಎಂಬ ಮಹಿಳೆ ಮುಂಬೈ ನ ಸ್ವೆರಿ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 18 ನೇ ಮಹಡಿಯಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಆತ್ಮಹತ್ಯೆಯನ್ನು ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಿದಾಗ ಸ್ಥಳೀಯರೊಬ್ಬರು ಪೊಲೀಸ್ ಕಂಟ್ರೋಲ್ ರೂಮ್ ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯನ್ನು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವೊಲಿಕೆ ಮಾಡಿದ್ದಾರೆ.
ಇಂತಹ ಪರಿಸ್ಥಿತಿಗಳನ್ನು ನಿಭಾಯಿಸಲೆಂದೇ ವಿಶೇಷ ತರಬೇತಿ ಪಡೆದಿರುವ ಇನ್ಸ್ ಪೆಕ್ಟರ್ ಶಾಲಿನಿ ಶರ್ಮಾ ಆತ್ಮಹತ್ಯೆಯನ್ನು ತಡೆಗಟ್ಟುವುದರಲ್ಲಿ ಯಶಸ್ವಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics