ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲಖನೌ: ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಚಲಾನೆ ನೀಡಿದ ಯೋಗಿ ಆದಿತ್ಯನಾಥ್

ಸ್ವಚ್ಛ ಭಾರತ ಅಭಿಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಯೋಗಿ ಆದಿತ್ಯನಾಥ್
Srinivas Rao BV
Updated On : 6 May 2017, 10:35 am
ಲಖನೌ: ಸ್ವಚ್ಛ ಭಾರತ ಅಭಿಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವತಃ ತಾವೇ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. 
ಮೇ.04 ರಂದು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಸ್ವಚ್ಛ ಸರ್ವೇಕ್ಷಣೆಯ ಫಲಿತಾಂಶಗಳನ್ನು ಪ್ರಕಟಿಸಿತ್ತು. ಸ್ವಚ್ಛ ನಗರಗಳ ಪಟ್ಟಿಯಲ್ಲಿ ಇಂದೋರ್ ಹಾಗೂ ಭೋಪಾಲ್ ಸ್ಥಾನ ಪಡೆದಿತ್ತು. ಆದರೆ ಉತ್ತರ ಪ್ರದೇಶ ಸ್ವಚ್ಛತೆಯ ವಿಷಯದಲ್ಲಿ ಸಾಕಷ್ಟು ಸುಧಾರಣೆ ಕಾಣಬೇಕಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೊರಕೆ ಹಿಡಿದು ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement