ದೇಶ

ದೆಹಲಿ 'ಭ್ರಷ್ಟ' ಪೊಲೀಸ್ ಅಧಿಕಾರಿಯಿಂದ ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದ ತನಿಖೆ

Lingaraj Badiger
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಆಮ್ ಆದ್ಮಿ ಪಕ್ಷದಿಂದ ಪದೇ ಪದೆ 'ಭ್ರಷ್ಟಾಚಾರಿ' ಎಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ದೆಹಲಿ ಪೊಲೀಸ್ ಅಧಿಕಾರಿ ಎಂ.ಕೆ.ಮೀನಾ ಅವರೇ ಈಗ ಕೇಜ್ರಿವಾಲ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ನೇತೃತ್ವದ ವಹಿಸಿಕೊಂಡಿದ್ದಾರೆ.
400 ಕೋಟಿ ರುಪಾಯಿ ನೀರಿನ ಟ್ಯಾಂಕರ್ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಿದ್ದು, ಪ್ರಕರಣದ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ಎಸಿಬಿ ಮುಖ್ಯಸ್ಥ ಮೀನಾ ಅವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗಯಷ್ಟೇ ಕಪಿಲ್ ಮಿಶ್ರಾ ಅವರು, ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಎಸಿಬಿಗೆ ದಾಖಲೆಗಳನ್ನು ಸಲ್ಲಿಸಿದ್ದರು.
SCROLL FOR NEXT