ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ

ಅಪಾರ್ಟ್ ಮೆಂಟ್ ನ ಮೊದಲನೇ ಮಹಡಿಯ ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಿದ್ರಿಸುತ್ತಿದ್ದ ನಾಲ್ಕು ಮಂದಿ ...

ಚೆನ್ನೈ: ಅಪಾರ್ಟ್ ಮೆಂಟ್ ನ ಮೊದಲನೇ ಮಹಡಿಯ ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಿದ್ರಿಸುತ್ತಿದ್ದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಚೆನ್ನೈನ ವಡಪಳನಿಯಲ್ಲಿ ನಡೆದಿದೆ.
ಮೀನಾಕ್ಷಿ(60), ಸೆಲ್ವಿ(35), ಸಂಧ್ಯಾ ಮತ್ತು ಸಂಜಯ್ ಮೃತ ದುರ್ದೈವಿಗಳು. ಈ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ಹೊತ್ತಿ ಕೊಂಡ ಬೆಂಕಿಯಿಂದಾಗಿ ಮೊದಲನೇ ಮಹಡಿಗೆ ಪಸರಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪಾರ್ಕಿಂಗ್ ನಲ್ಲಿಂದ 20 ವಾಹನಗಳು ಸುಟ್ಟು ಹೋಗಿವೆ. ಪಾರ್ಕಿಂಗ್ ಸ್ಥಳದಿಂದ ಬೆಂಕಿ ಮೊದಲ ಮಹಡಿಯಲ್ಲಿದ್ದ 2 ಮನೆಗಳಿಗೆ ವ್ಯಾಪಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಿನ ಜಾವ 4.30 ರ ಸುಮಾರಿಗೆ ದುರಂತ ಸಂಭವಿಸಿದೆ. ಮನೆಯವರ ಚೀರಾಟ ಕೇಳಿದ ಅಕ್ಕಪಕ್ಕದ ಮನೆಯವರು ಉಳಿದ 9 ಮಂದಿಯನ್ನು ಬೆಂಕಿಯಿಂದ ರಕ್ಷಿಸಿದ್ದಾರೆ, ಕೂಡಲೇ ಅವರನ್ನ ಕಿಲ್ಪೌಕ್ ಮೆಡಿಕಲ್ ಆಸ್ಪತ್ರೆದೆ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ