ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ 
ದೇಶ

ಮುಂಗಾರು ವೈಫಲ್ಯದ ಸಾಧ್ಯತೆಯನ್ನು ಎದುರಿಸಲು ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಕೃಷಿ ಸಚಿವರ ಪತ್ರ

ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮ....

ನವದೆಹಲಿ: ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸುವಂತೆ ಕೇಂದ್ರ ಕೃಷಿ ಖಾತೆ ಸಚಿವ ರಾಧಾ ಮೋಹನ್ ಸಿಂಗ್ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಶೇಕಡಾ 25ರಷ್ಟು ಹಣವನ್ನು ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡಲು ಕೇಂದ್ರ ಸರ್ಕಾರ ಅವಕಾಶ ನೀಡುತ್ತದೆ. ಇದನ್ನು ನೈಸರ್ಗಿಕ ವಿಕೋಪಗಳ ಪರಿಣಾಮಗಳನ್ನು ಎದುರಿಸಲು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.
ಬರಗಾಲ ಸಂದರ್ಭದಲ್ಲಿ ರೈತರು ಅನುಭವಿಸಿದ ನಷ್ಟವನ್ನು ಭರಿಸಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಲು ಒತ್ತು ನೀಡಬೇಕು. ಹವಾಮಾನ ಬದಲಾವಣೆಯ ಸನ್ನಿವೇಶಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವಂತೆ ಅವರು ಮುಖ್ಯ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲೂ ರಾಜ್ಯ ಸರ್ಕಾರಗಳು ಸಿದ್ಧವಾಗಿರಬೇಕು.  ಭಾರತೀಯ ಹವಾಮಾನ ಇಲಾಖೆ ಖಾರಿಫ್ ಋತುವಿನಲ್ಲಿ ನೈರುತ್ಯ ಮುಂಗಾರು ಶೇಕಡಾ 96ರಷ್ಟು ಮಳೆ ಬೀಳಬಹುದೆಂದು ಮುನ್ಸೂಚನೆ ನೀಡಿದೆ ಎಂದು ಪತ್ರದಲ್ಲಿ ಕೇಂದ್ರ ಸಚಿವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್