ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಕೇಜ್ರಿವಾಲ್ ಒಬ್ಬ '420', ಶೀಘ್ರವೇ ಜೈಲು ಸೇರಲಿದ್ದಾರೆ: ಸುಬ್ರಮಣಿಯನ್ ಸ್ವಾಮಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಬ್ಬ '420', ಶೀಘ್ರದಲ್ಲೇ ಜೈಲು ಸೇರಲಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಬ್ಬ '420', ಶೀಘ್ರದಲ್ಲೇ ಜೈಲು ಸೇರಲಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ. 
ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇಜ್ರಿವಾಲ್ ಒಬ್ಬ ವಂಚಕ '420' ಆಗಿದ್ದು, ಶೀಘ್ರದಲ್ಲಿಯೇ ಜೈಲು ಸೇರಲಿದ್ದಾರೆ. ಸುಧೀರ್ಘ ಜೈಲು ಶಿಕ್ಷೆ ಅನುಭವಿಸಲಿದ್ದಾರೆಂದು ಹೇಳಿದ್ದಾರೆ. 
 ಕೇಜ್ರಿವಾಲ್ ಏನೇ ಹೇಳಿದರೂ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಮಾನನಷ್ಟ ಮೊಕದ್ದಮೆ ಸೇರಿದಂತೆ ಹಲವಾರು ಪ್ರಕರಣಗಳನ್ನು ಕೇಜ್ರಿವಾಲ್ ಅವರು ಎದುರಿಸುತ್ತಿದ್ದಾರೆ. ಹೀಗಾಗಿ ಕೇಜ್ರಿವಾಲ್ ಶೀಘ್ರವೇ ಜೈಲು ಸೇರಲಿದ್ದು, ದೀರ್ಘಕಾಲದವರೆಗೂ ಜೈಲಿನಲ್ಲಿ ಕಾಲ ಕಳೆಯಲಿದ್ದಾರೆಂದು ತಿಳಿಸಿದ್ದಾರೆ. 
ಕೇಜ್ರಿವಾಲ್ ಅವರ ಸಂಪುಟದಲ್ಲಿಯೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಕಪಿಲ್ ಮಿಶ್ರಾ ಅವರನ್ನು ಕೆಲ ದಿನಗಳ ಹಿಂದಷ್ಟೇ ವಜಾಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಿಂದ ರೂ.2 ಕೋಟಿ ಲಂಚ ಪಡೆದಿದ್ದಾರೆಂದು ಮಿಶ್ರಾ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಒತ್ತಾಯಗಳು ವಿರೋಧ ಪಕ್ಷಗಳಿಂದ ಕೇಳಿಬರುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!