ಜಲ ಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸುತ್ತಿರುವುದು 
ದೇಶ

ಕೇಜ್ರಿವಾಲ್ ರಾಜಿನಾಮೆಗೆ ಆಗ್ರಹಿಸಿ ದೆಹಲಿ ಸಿಎಂ ನಿವಾಸದ ಬಳಿ ಬಿಜೆಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು...

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ದೆಹಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಸಿಎಂ ಕೇಜ್ರಿವಾಲ್ ಅವರಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆ ಮತ್ತು ಕೇಜ್ರಿವಾಲ್ ಅವರ ಭಾವನಿಗಾಗಿ 50 ಕೋಟಿ ರುಪಾಯಿ ಡೀಲ್ ಕುದುರಿಸಿದ್ದಾರೆ ಎಂದು ದೆಹಲಿ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ನಿನ್ನೆ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ದೆಹಲಿ ಸಿಎಂ ಹಾಗೂ ಸತ್ಯೇಂದ್ರ ಜೈನ್ ಅವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಸಿವಿಲ್ ಲೈನ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಬ್ಯಾರಿಕೇಡ್ ಬಳಸಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ ಮತ್ತು ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಜಲ ಫಿರಂಗಿ ಬಳಿಸಿದ್ದಾರೆ.
ಈ ವೇಳೆ ಮಾತನಾಡಿದ ದೆಹಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಯಾದವ್ ಅವರು, ಕೇಜ್ರಿವಾಲ್ ಅವರು ಒಬ್ಬ ಸುಳ್ಳುಗಾರ. ಅವರು ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಮತ್ತು ಜೈನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ಭ್ರಷ್ಟಾಚಾರ ಬಹಿರಂಗಪಡಿಸಿದ್ದಕ್ಕಾಗಿ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್