ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಠಾಣಾಧಿಕಾರಿ ವಿರುದ್ಧ ಅತ್ಯಾಚಾರ ಆರೋಪ: ಗುಪ್ತಾಂಗಕ್ಕೆ ಬೀರ್ ಬಾಟಲ್, ಖಾರದ ಪುಡಿ ಹಾಕಿ ಹಿಂಸೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಅಮಾನವೀಯ ನಡೆದಿದ್ದು, ಪೊಲೀಸ್ ಠಾಣೆಯಲ್ಲೇ ಠಾಣಾ ಅಧಿಕಾರಿ ತನ್ನನ್ನು ....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಅಮಾನವೀಯ ನಡೆದಿದ್ದು, ಪೊಲೀಸ್ ಠಾಣೆಯಲ್ಲೇ ಠಾಣಾ ಅಧಿಕಾರಿ ತನ್ನನ್ನು ವಿವಸ್ತ್ರಗೊಳಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ ತನ್ನ ಗುಪ್ತಾಂಗಕ್ಕೆ ಬೀರ್ ಬಾಟಲ್ ಹಾಕಿ, ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ್ದಾರೆ ಎಂದು ಜಮ್ಮು ಮಹಿಳೆ ಆರೋಪಿಸಿದ್ದಾರೆ.
ಸಿಎನ್ಎನ್-ನ್ಯೂಸ್ 18ನೊಂದಿಗೆ ಮಾತನಾಡಿದ ಸಂತ್ರಸ್ಥೆಯ ಪರ ವಕೀಲರು, ಇದು ದೆಹಲಿಯಲ್ಲಿ ನಡೆದ ನಿರ್ಭಯಾ ಗ್ಯಾಂಗ್ ರೇಪ್ ರೀತಿಯಲ್ಲಿ ನಡೆದಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ ಘಟನೆಯ ಬಗ್ಗೆ ತಕ್ಷಣವೇ ಗಮನ ಹರಿಸುವಂತೆ ಪ್ರಧಾನಮಂತ್ರಿಗಳ ಕಚೇರಿಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸೂಚಿಸಿದ್ದಾರೆ.
ಕೆಲವು ದಿನಗಳ ಹಿಂದೆ ಕಳ್ಳತನದ ಆರೋಪದ ಮೇಲೆ ತನ್ನನ್ನು ಕಣಚಲ್ ಪೊಲೀಸ್ ಠಾಣೆಗೆ ಕರೆದೊಯ್ದು ಠಾಣಾಧಿಕಾರಿ ರಾಕೇಶ್ ಶರ್ಮಾ ಅವರು ಸುಮಾರು ಒಂದು ವಾರಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಜಮ್ಮುವಿನ ಕಣಚಲ್ ಪ್ರದೇಶದ ನಿವಾಸಿ 25 ವರ್ಷದ ಯುವತಿ ಆರೋಪಿಸಿದ್ದಾರೆ.
ಖಾಸಗಿ ವಾಹಿನಿಗೆ ಮಾತನಾಡಿದ ಮಹಿಳೆ ನನ್ನ ವಿರುದ್ಧ ನಕಲಿ ಕಳ್ಳತನದ ದೂರು ದಾಖಲಿಸಲಾಗಿದೆ. ಪೊಲೀಸ್ ವಶದಲ್ಲಿದ್ದ ವೇಳೆ ತನಗೆ ಊಟ ಕೊಟ್ಟಿಲ್ಲ ಮತ್ತು ನೀರು ಕೇಳಿದರೆ ಮೂತ್ರ ಕುಡಿಯುವಂತೆ ಗದರಿಸುತ್ತಿದ್ದರು. ಅಲ್ಲದೆ ತನ್ನ ತಾಯಿ, ಪತಿ ಮತ್ತು ಮಕ್ಕಳ ಮೇಲೂ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ