ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ಪಿ ಶಾಸಕ ನಸೀಮುದ್ದೀನ್, ಪುತ್ರನ ಉಚ್ಛಾಟನೆ
ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಶಾಸಕ ನಸೀಮುದ್ದೀನ್ ಸಿದ್ಧಿಕೆ ಮತ್ತು ಆತನ ಪುತ್ರ ಅಫ್ಜಲ್ ನನ್ನು ಪಕ್ಷದಿಂದ...
ಲಖನೌ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಶಾಸಕ ನಸೀಮುದ್ದೀನ್ ಸಿದ್ಧಿಕೆ ಮತ್ತು ಆತನ ಪುತ್ರ ಅಫ್ಜಲ್ ನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ನಸೀಮುದ್ದೀನ್ ಸಿದ್ಧಿಕಿ ಅವರು ತಾನು ಮಾಡಿಕೊಟ್ಟ ಕೆಲಸಗಳಿಗಾಗಿ ಜನರಿಂದ ಹಣ ಪಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ ಎಂದು ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯರಾಗಿರುವ ಸತೀಶ್ ಚಂದ್ರ ಮಿಶ್ರಾ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸತೀಶ್ ಚಂದ್ರ ಮಿಶ್ರಾ ಅವರು ಈ ರೀತಿಯ ಅಶಿಸ್ತನ್ನು ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ ಎಂದೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.