ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ: ಹವಾಮಾನ ಇಲಾಖೆ ವರದಿ!
ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗದಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ನೀಡಿದೆ.
ನವದೆಹಲಿ: ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗದಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ನೀಡಿದೆ.
ಎಲ್ ನಿನೋ ಪರಿಣಾಮದಂದಾಗಿ ಭಾರತದಲ್ಲಿ ಈ ಬಾರಿ ಉತ್ತಮ ಮಳೆಯಾಗಲಿದ್ದು, ಉತ್ತರ ಭಾರತದ ರಾಜ್ಯಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೇಂದ್ರ ಹವಾಮಾನ ಇಲಾಖೆ ಮುಖ್ಯಸ್ಥರು ಮಂಗಳವಾರ ಈ ಬಗ್ಗೆ ವರದಿ ನೀಡಿದ್ದು, ಈ ಬಾರಿ ಮಾನ್ಸೂನ್ ಮಳೆ ಉತ್ತಮವಾಗಿರಲಿದ್ದು, ಕೃಷಿ ಉದ್ಯಮಕ್ಕೆ ನೆರವಾಗಲಿದೆ. ಆ ಮೂಲಕ ಆರ್ಥಿಕಾಭಿವೃದ್ಧಿಯಲ್ಲೂ ಗಮನಾರ್ಹ ಬೆಳವಣಿಗೆ ಕಾಣಬಹುದಾಗಿದೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಮಾನ್ಸೂನ್ ಮಳೆ ಶೇ.70 ಮಳೆ ಸುರಿಸಿತ್ತು. ಹೀಗಾಗಿ ಭತ್ತ, ಕಬ್ಬು, ಜೋಳ ಮತ್ತು ಹತ್ತಿಯಂತಹ ಬೆಳಗಳ ಇಳುವರಿಯಲ್ಲಿ ಇಳಿಕೆಯಾಗಿತ್ತು. ಆದರೆ ಈ ಬಾರಿ ಹವಾಮಾನದಲ್ಲಿ ಸಕಾರಾತ್ಮಕ ಬದಲಾವಣೆಯಾಗಿದ್ದು, ಶೇ.96ರಷ್ಟು ಮಳೆಯನ್ನು ನಾವು ನಿರೀಕ್ಷಿಸಬಹುದಾಗಿದೆ. ಏಪ್ರಿಲ್ 18 ರ ಬಳಿಕದ ವಾತಾವರಣ ಮಳೆಗೆ ಪೂರಕವಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಕೆಜೆ ರಮೇಶ್ ತಿಳಿಸಿದ್ದಾರೆ.
ಮೇ-29 ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ, ಈ ವರ್ಷ ಉತ್ತಮ ಮುಂಗಾರು ಮಳೆ ನಿರೀಕ್ಷೆ
ಈ ವರ್ಷದ ಮುಂಗಾರು ಮಳೆ ಮೇ 29 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಕರ್ನಾಟಕ ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಹೇಳಿದೆ. ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಜೂನ್ 1ರಂದು ನೈರುತ್ಯ ಮುಂಗಾರು ಮಾರುತ ಕೇರಳ ಪ್ರವೇಶಿಸಲಿದೆ, ಅದಾದ ನಾಲ್ಕು ಅಥವಾ ಐದು ದಿನಗಳ ನಂತರ ಕರ್ನಾಟಕ ಒಳನಾಡು ಪ್ರವೇಶಿಸಲಿದೆ ಎಂದು ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.