ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಗಡಿ ನುಸುಳಲು ಯತ್ನ, ಉಗ್ರರನ್ನು ಹಿಮ್ಮೆಟ್ಟಿಸಿದ ಸೇನೆ

ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಮೂಲಕ ಭಾರತದ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಬುಧವಾರ ಹಿಮ್ಮೆಟ್ಟಿಸಿದೆ...

ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಮೂಲಕ ಭಾರತದ ಒಳ ನುಸುಳಲು ಯತ್ನ ನಡೆಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಬುಧವಾರ ಹಿಮ್ಮೆಟ್ಟಿಸಿದೆ. 
ಸಾಕಷ್ಟು ಶಸ್ತ್ರಸಜ್ಜಿತರಾಗಿ ಬಂದಿದ್ದ ಉಗ್ರರ ಗುಂಪೊಂದು ಬಾರಾಮುಲ್ಲಾದ ಗಡಿ ನಿಯಂತ್ರಣ ರೇಳೆ ಬಳಿ ಬಂದು ಭಾರತದ ಒಳಗೆ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರರು ಸ್ಥಳದಿಂದ ಕಾಲ್ಕಿತ್ತುವಂತೆ ಮಾಡಿದೆ ಎಂದು ತಿಳಿದುಬಂದಿದೆ. 
ಬಾರಾಮುಲ್ಲಾ ಜಿಲ್ಲೆ ರಾಮ್ಪುರ ಸೆಕ್ಟರ್ ಬಳಿ ಕಳೆದ ರಾತ್ರಿ ಉಗ್ರರ ಗುಂಪು ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿತ್ತು. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರರ ಯತ್ನವನ್ನು ವಿಫಲವಾಗುವಂತೆ ಮಾಡಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಗಡಿ ನುಸುಳಲು ಉಗ್ರರು ಯತ್ನ ನಡೆಸುತ್ತಿರುವ ಹಿನ್ನಲೆಯಲ್ಲಿ, ಉಗ್ರರ ನಿಗ್ರಹಕ್ಕಾಗಿ ಸೇನಾ ಪಡೆ ಸ್ಥಳದಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT