ನವದೆಹಲಿ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ಅವರು, ಗುಜರಾತ್‌ನ ಯಾವುದೇ ಯೋಧ ಹುತಾತ್ಮನಾಗಿಲ್ಲ ಏಕೆ? ಎಂದು ಪ್ರಶ್ನಿಸುವ ಮೂಲಕ ಹೊಸ ವಿವಾದಕ್ಕೆ ಕಾರಣವಾಗಿದ್ದಾರೆ.
ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಸಮಾಜವಾದಿ ಪಕ್ಷದ ನಾಯಕ, ರಾಷ್ಟ್ರೀಯತೆ ಮತ್ತು ವಂದೇ ಮಾತರಂ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ದಕ್ಷಿಣ ಭಾರತ ಸೇರಿದಂತೆ ದೇಶದ ಇತರ ಭಾಗಗಳ ಯೋಧರು ಹುತಾತ್ಮರಾಗಿದ್ದಾರೆ, ಆದರೆ ಗುಜರಾತ್ ನಿಂದ ಯಾವ ಯೋಧನೂ ಹುತಾತ್ಮನಾಗಿಲ್ಲ ಏಕೆ ಎಂದು ಪ್ರಶ್ನಿಸುವ ಮೂಲಕ ಅಖೀಲೇಶ್ ಯಾದವ್ ಅವರು ತಮ್ಮಲ್ಲಿನ ಸಂವೇದನಾ ರಹಿತ ಮನೋಭಾವವನ್ನು ಬಹಿರಂಗಪಡಿಸಿದ್ದಾರೆ.
ಅಖಿಲೇಶ್ ಯಾದವ್ ಅವರ ಈ ಹೇಳಿಕೆಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಯೋಧರು ಯಾವುದೇ ಪ್ರದೇಶಕ್ಕೆ ಸೇರಿದವರಲ್ಲ. ಅವರು ದೇಶಕ್ಕೆ ಸೇರಿದವರು. ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡುವುದಕ್ಕೆ ನಾಚಿಕೆಯಾಗಬೇಕು ಎಂದು ಹಲವರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics