ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ತ್ರಿವಳಿ ತಲಾಖ್ ವಿಷಯದಲ್ಲಿ ರಾಜಕೀಯ ಮಾಡಲು ಬಿಡಬೇಡಿ: ಮುಸ್ಲಿಂ ಸಮುದಾಯಕ್ಕೆ ಪ್ರಧಾನಿ ಮೋದಿ

ತ್ರಿವಳಿ ತಲಾಖ್ ವಿಷಯವನ್ನು ರಾಜಕೀಯಗೊಳಿಸಲು ಮುಸ್ಲಿಂ ಸಮುದಾಯ ಬಿಡಬಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ತ್ರಿವಳಿ ತಲಾಖ್ ವಿಷಯವನ್ನು ರಾಜಕೀಯಗೊಳಿಸಲು ಮುಸ್ಲಿಂ ಸಮುದಾಯ ಬಿಡಬಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. 
ಜಮಿಯತ್ ಉಲೇಮಾ ಇ ಹಿಂದ್ ನಾಯಕರ ಜೊತೆಗೆ ನಿನ್ನೆ ನಡೆಸಲಾದ ಸಮಾಲೋಚನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಅಭಿಪ್ರಾಯವನ್ನು ಹೊರಹಾಕಿದ್ದಾರೆ. 
ತ್ರಿವಳಿ ತಲಾಖ್ ವಿಷಯವನ್ನು ಮುಸ್ಲಿಂ ಸಮುದಾಯ ಯಾವುದೇ ಕಾರಣಕ್ಕೂ ರಾಜಕೀಯಗೊಳಿಸಲು ಬಿಡಬಾರದು. ಈ ವಿಚಾರದ ಸುಧಾರಣೆಯಲ್ಲಿ ಮುಸ್ಲಿಂ ಸಮುದಾಯದ ನಿಯೋಗ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಹೇಳಿದ್ದಾರೆ. 
ತ್ರಿವಳಿ ತಲಾಖ್ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿಲುವುಗಳಿಗೆ ಮುಸ್ಲಿಂ ನಿಯೋಗದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಮೇಲೆ ದೇಶದ ಜನತೆ ಭರವಸೆ ಇಟ್ಟಿದ್ದಾರೆ. ಅವರು ಜನಪರ ನಿಲುವು ತೆಗೆದುಕೊಳ್ಳುತ್ತಾರೆಂದು ಭಾವಿಸಿದ್ದೇವೆ. ಎಲ್ಲಾ ವಿಷಯಗಳ ಕುರಿತಂತೆ ಮೋದಿಯವರ ವರ್ತನೆ ತೃಪ್ತಿಕರವಾಗಿದ್ದು, ಹಲವಾರು ಭರವಸೆಗಳನ್ನು ನಂಬಿ ಹೊರಟಿದ್ದೇವೆಂದು ಮುಸ್ಲಿಂ ನಿಯೋಗದ ಸದಸ್ಯರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ