ಕಾಂಗ್ರೆಸ್ ನಾಯಕ ಶಶಿ ತರೂರ್ 
ದೇಶ

ಸುನಂದಾ ಪುಷ್ಕರ್ ಬಗ್ಗೆ ಮುಚ್ಚಿಡಲು ಏನೂ ಇಲ್ಲ: ಶಶಿ ತರೂರ್

ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ ಕುರಿತಂತೆ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮಂಗಳವಾರ...

ತಿರುವನಂತಪುರ: ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ ಕುರಿತಂತೆ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮಂಗಳವಾರ ಹೇಳಿದ್ದಾರೆ. 
ಸುನಂದಾ ಪುಷ್ಕರ್ ಸಾವಿನ ರಹಸ್ಯವನ್ನು ಮುಚ್ಚಿಡುತ್ತಿದ್ದಾರೆಂಬ ಖಾಸಗಿ ವಾಹಿನಿಗಳ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸುನಂದಾ ಬಗ್ಗೆ ಮುಚ್ಚಿಡುವಂತಹದ್ದು ಏನೂ ಇಲ್ಲ. ಮಾಧ್ಯಮದಲ್ಲಿ ಪ್ರಸಾರವಾಗಿರುವ ವರದಿಗಳನ್ನು ತಿರುಚಲಾಗಿದ್ದು, ಈ ಕುರಿತ ವರದಿಗಳಿಗೆ ಸಂಬಂಧಿಸಿ ಎಲ್ಲಾ ಸತ್ಯಗಳು ಪೊಲೀಸರಿಗೆ ತಿಳಿದಿದೆ ಎಂದು ಹೇಳಿದ್ದಾರೆ. 
ತಮ್ಮ ವಾಹಿನಿ ಬಗ್ಗೆ ಜನರ ಗಮನ ಸೆಳೆಯುವ ಉದ್ದೇಶ ಹೊಂದಿರುವ ವಾಹನಿಯೊಂದು ಈ ರೀತಿಯ ಕೆಲಸಗಳನ್ನು ಮಾಡುತ್ತಿದೆ. ಅವರಿಗೆ ಸತ್ಯದ ಬಗ್ಗೆ ಆಸಕ್ತಿಯಿಲ್ಲ. ವೈಯಕ್ತಿದ ದ್ವೇಷವನ್ನು ಈರೀತಿಯಾಗಿ ತೀರಿಸಿಕೊಳ್ಳುತ್ತಿರುವುದನ್ನು ನೋಡಿದರೆ ನಿಜಕ್ಕೂ ಕೋಪ ಹಾಗೂ ಬೇಸರವಾಗುತ್ತಿದೆ. 
ಸುನಂದಾ ಬಗ್ಗೆ ಮುಚ್ಚಿಡಲು ಏನೂ ಇಲ್ಲ. ತನಿಖೆ ಕುರಿತಂತೆ ಪೊಲೀಸರಿಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದೇನೆ. ಕಳೆದ 3 ವರ್ಷಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುನಂದಾ ಅವರನ್ನು ಕೊಲೆಯೇ ಎಂಬುದನ್ನು ಈವರೆಗೂ ಪತ್ತೆ ಮಾಡಲಾಗಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT