ರಾಯ್ಪುರ: ಛತ್ತೀಸ್ಗಢದ ಪಂಖಜೂರ್ ಎಂಬಲ್ಲಿ ನಕ್ಸಲರು ಬೀಡುಬಿಟ್ಟಿರುವ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಗಳಿದಿದ್ದು, ಬಿಎಸ್ಎಫ್ ಯೋಧರು ಮತ್ತು ನಕ್ಸಲರ ನಡುವೆ ಭಾರೀ ಗುಂಡಿನ ಚಕಮಕಿ ನಡೆಸುತ್ತಿರುವುದಾಗಿ ಗುರುವಾರ ತಿಳಿದುಬಂದಿದೆ.
ಕೆಲ ದಿನಗಳ ಹಿಂದಷ್ಟೇ ಸುಕ್ಮಾದಲ್ಲಿ ಸಿಆರ್'ಪಿಎಫ್ ಯೋಧರ ಮೇಲೆ ದಾಳಿ ಮಾಡಿದ್ದ ನಕ್ಸಲರು, 25 ಯೋಧರನ್ನು ಬಲಿ ಪಡೆದುಕೊಂಡಿದ್ದರು. ದಾಳಿ ಬಳಿಕ ಸೇನಾ ಪಡೆ ನಕ್ಸಲರ ವಿರುದ್ಧದ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು.
ಇದರಂತೆ ಪಂಖಜೂರ್'ನ ಕೊಡೆಯ್ನಾರ್ ಎಂಬಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭದ್ರತಾ ಪಡೆಗಳ ಮೇಲೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಭದ್ರತಾ ಪಡೆ ದಾಳಿಗೆ ದಿಟ್ಟ ಉತ್ತರವನ್ನು ನೀಡಲು ಆರಂಭಿಸಿದೆ. ಗುಂಡಿನ ಚಕಮಕಿಯಲ್ಲಿ ಸಾವು-ನೋವು ಸಂಭವಿಸಿರುವುದಾಗಿ ಯಾವುದೇ ವರದಿಗಳಾಗಿಲ್ಲ.
ಛತ್ತೀಸ್ಗಢ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಗುಂಡಿನ ಚಕಮಕಿ ವೇಳೆ ಕೆಲ ನಕ್ಸಲರಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics