ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ವಾಹನ ಮಗುಚಿ 11 ಸಾವು, 15 ಜನರಿಗೆ ಗಾಯ

ಮಧ್ಯಪ್ರದೇಶದ ಜಬಲ್ಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರೊಂದು ಮಗುಚಿ ಬಿದ್ದ ಪರಿಣಾಮ 11 ಮಂದಿ ದುರ್ಮರಣವನ್ನಪ್ಪಿರುವ ಘಟನೆ...

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಕಾರು ಮಗುಚಿ 11 ಸಾವು, 15 ಜನರಿಗೆ ಗಾಯ
Manjula VN
Updated On : 11 May 2017, 12:05 pm
ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಮಗುಚಿ ಬಿದ್ದ ಪರಿಣಾಮ 11 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. 
ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರನ್ನು ವಾಹನವೊಂದು ಹೊತ್ತೊಯ್ಯುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ವಾಹನ ಮಗುಚಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ 10 ಮಂದಿ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ. 
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಪ್ರಸ್ತುತ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲವ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Advertisement

Advertisement

ಮೃತರ ಕುಟುಂಬಕ್ಕೆ ರೂ.50 ಸಾವಿರ ಪರಿಹಾರ ಘೋಷಣೆ
ಅಪಘಾತಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತ ಕುಟುಂಬಕ್ಕೆ ರೂ.50,000 ಹಾಗೂ ಗಾಯಾಳುಗಳಿಗೆ ರೂ.25,000 ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement