ಬಿಎಸ್ ಪಿಗೆ ಮಾಯಾವತಿ 50 ಕೋಟಿ ರೂಪಾಯಿ ಕೇಳಿದ್ದರು: ಸಿದ್ದಿಕಿ
ಪಕ್ಷವಿರೋಧಿ ಚಟುವಟಿಕೆ ಆರೋಪದಡಿ ಪಕ್ಷದಿಂದ ಉಚ್ಛಾಟನೆಗೊಂಡ ಬಿಎಸ್ ಪಿ ನಾಯಕ ಸಿದ್ದಿಕಿ ಈಗ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಲಖನೌ: ಪಕ್ಷವಿರೋಧಿ ಚಟುವಟಿಕೆ ಆರೋಪದಡಿ ಪಕ್ಷದಿಂದ ಉಚ್ಛಾಟನೆಗೊಂಡ ಬಿಎಸ್ ಪಿ ನಾಯಕ ಸಿದ್ದಿಕಿ ಈಗ ಬಿಎಸ್ ಪಿ ನಾಯಕಿ ಮಾಯಾವತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಮಾಯಾವತಿ ಪಕ್ಷಕ್ಕಾಗಿ 50 ಕೋಟಿ ರೂಪಾಯಿ ಕೇಳಿದ್ದರು ಎಂದಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಿದ್ದಿಕಿ, ಮಾಯಾವತಿ ಹಾಗೂ ಅವರ ಸಹೋದರ ಇಬ್ಬರೂ ಪಕ್ಷಕ್ಕೆ 50 ಕೋಟಿ ರೂಪಾಯಿ ನೀಡುವಂತೆ ಅಕ್ರಮ ಬೇಡಿಕೆ ಮುಂದಿಟ್ಟಿದ್ದರು. ನಾನೆಲ್ಲಿಂದ ಅಷ್ಟು ಹಣ ತರಲಿ ಎಂಬ ನನ್ನ ಪ್ರಶ್ನೆಗೆ, "ನಿಮ್ಮ ಆಸ್ತಿಯನ್ನು ಮಾರಾಟ ಮಾಡಿ ಹಣ ಕೊಡು" ಎಂಬ ಪ್ರತಿಕ್ರಿಯೆ ನೀಡಿದ್ದರು" ಎಂದು ಸಿದ್ದಿಕಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಹಾಗೂ ಎಸ್ ಪಿ ಮೈತ್ರಿ ಮಾಡಿಕೊಂಡಿದ್ದವು ಈ ಬಗ್ಗೆ ಮುಸ್ಲಿಮ್ ಸಮುದಾಯ ಎಚ್ಚರಿಕೆ ನೀಡುತ್ತಿದೆ ಎಂದು ಹೇಳಿದಾಗ ಮುಸ್ಲಿಂ ಸಮುದಾಯ ದ್ರೋಹಿಗಳೆಂದು ಟೀಕಿಸಿದ್ದರು ಎಂದು ಸಿದ್ದಿಕಿ ಮಾಯಾವತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.