ನವದೆಹಲಿ: ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷ ಮೂನ್ ಜಿ ಇನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಭಾರತಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ನನ್ನ ಸ್ನೇಹಿತ, ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷ ಮೂನ್ ಜಿ ಇನ್ ಅವರೊಂದಿಗೆ ಮಾತನಾಡಿದೆ. ಅಭಿನಂದನೆ, ಶುಭಕೋರಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಮೇ.10 ರಂದು ಮೂನ್ ಜಿ ಇನ್ ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.