ಬೀಜಿಂಗ್: ಚೀನಾದಲ್ಲಿ ನಡೆಯಲಿರುವ ಒನ್ ಬೆಲ್ಟ್ ಒನ್ ರೋಡ್ ಸಮ್ಮೇಳನದಿಂದ ಭಾರತ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.
ಭಾರತದ ನೆರೆ ರಾಷ್ಟ್ರಗಳಾದ ಪಾಕಿಸ್ತಾನ, ಶ್ರೀಲಂಕಾ, ಮಾಲ್ಡೀವ್ಸ್, ಮಯನ್ಮಾರ್ ನ ಅಧ್ಯಕ್ಷರು, ಪ್ರಧಾನಿಗಳು ಒಬಿಒಆರ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನು ಬಾಂಗ್ಲಾದೇಶ ಹಾಗೂ ನೇಪಾಳ ಉನ್ನತ ಮಟ್ಟದ ನಿಯೋಗ ಕಳಿಸುತ್ತಿದ್ದು, ಭಾರತ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.
ನೇಪಾಳ ಮೇ.12 ರಂದು ಚೀನಾದೊಂದಿಗೆ ಒಬಿಒಆರ್ ಅಡಿಯಲ್ಲಿ ಒಪ್ಪಂದ ಮಾಡಿಕೊಂಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಹಾದುಹೋಗುವ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್(ಸಿಪಿಇಸಿ) ಯೋಜನೆಯನ್ನು ವಿರೋಧಿಸಿ ಭಾರತ ಒಬಿಒಆರ್ ನಲ್ಲಿಯೂ ಭಾಗವಹಿಸದೇ ಇರಲು ತೀರ್ಮಾನಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಈ ಬಗ್ಗೆ ಭಾರತ ಸರ್ಕಾರದಿಂದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.