ಸಾಂದರ್ಭಿಕ ಚಿತ್ರ 
ದೇಶ

ಹರಿಯಾಣ: ಮದುವೆಗೆ ನಿರಾಕರಿಸಿದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ

ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆಯೊಬ್ಬರ ಮೇಲೆ ಅಮಾನವೀಯವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ...

ರೋಹ್ಟಕ್: ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆಯೊಬ್ಬರ ಮೇಲೆ ಅಮಾನವೀಯವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ರೋಹ್ಟಕ್ ನಲ್ಲಿ ನಡೆದಿದೆ.
ಕಳೆದ ಮೇ 9ರಂದು ಈ ಘಟನೆ ನಡೆದಿದ್ದು, ಇಂದು ನಗರದ ಐಎಂಟಿ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಒಂದು ವಾರಗಳ ಹಿಂದೆ ಆರೋಪಿ ಮಹಿಳೆಯ ಮನೆಗೆ ಹೋಗಿ ಮದುವೆ ಪ್ರಸ್ತಾಪ ಮಾಡಿದ್ದ. ಆದರೆ ಮಹಿಳೆ ಮದುವೆಗೆ ನಿರಾಕರಿಸಿದ್ದಳು. ಅಲ್ಲದೆ ಮದುವೆ ವಿಚಾರ ಸಂಬಂಧ ಇಬ್ಬರ ಮಧ್ಯ ತೀವ್ರ ವಾಗ್ವಾದ ನಡೆದಿದ್ದು, ಈ ವೇಳೆ ಯುವತಿ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಳು ಎಂದು ಸಂತ್ರಸ್ಥ ಯುವತಿಯ ಕುಟುಂಬದವರು ತಿಳಿಸಿದ್ದಾರೆ.
ಯುವತಿ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ ನೆರೆ ಮನೆಯ ಯುವಕ ಮೇ 9ರಂದು ತನ್ನ ಐದಾರು ಸ್ನೇಹಿತರೊಂದಿಗೆ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.
ಖಾಸಗಿ ಔಷಧಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕಳೆದ ಒಂದು ವರ್ಷದಿಂದ ಆರೋಪಿ ಮದುವೆಗೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ತಾಯಿ ತಿಳಿಸಿದ್ದಾರೆ. ಅಲ್ಲದೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಹಿಳೆಯ ಕುಟುಂಬ ಒತ್ತಾಯಿಸಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT