ಬಿಜಾಪುರ (ಛತ್ತೀಸ್ಗಢ): ಛತ್ತೀಸ್ಘಡದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಬಿಜಾಪುರ ಜಿಲ್ಲೆಯ ತಿಮರ್ಪುರ ಅರಣ್ಯದಲ್ಲಿ ನಕ್ಸಲರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಬಂದ ಹಿನ್ನಲೆಯಲ್ಲಿ ಎನ್ ಕೌಂಟರ್ ನಡೆಸಲು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಿಲ್ಲಾ ಮೀಸಲು ಪಡೆ (ಡಿಆರ್'ಜಿ) ಹಾಗೂ 204 ಕೋಬ್ರಾ (ಸಿಆರ್'ಪಿಎಫ್) ಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು.
ಈ ವೇಳೆ ನಕ್ಸಲರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.