ಗೋರಕ್ಷಕರು 
ದೇಶ

ವ್ಯಕ್ತಿಯ ಮೇಲೆ ಗೋರಕ್ಷಕರಿಂದ ಹಲ್ಲೆ: ಇಬ್ಬರ ಬಂಧನ

ಹಸುವಿನ ಬಾಲ ಕತ್ತರಿಸಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವ ಘಟನೆ ಉಜ್ಜೈನಿಯಲ್ಲಿ ನಡೆದಿದ್ದು ಹಲ್ಲೆ ನಡೆಸಿದ ಗುಂಪಿನಲ್ಲಿದ್ದವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಉಜ್ಜೈನಿ: ಹಸುವಿನ ಬಾಲ ಕತ್ತರಿಸಿದ್ದಾರೆಂದು ವ್ಯಕ್ತಿಯೊಬ್ಬರ ಮೇಲೆ ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವ ಘಟನೆ ಉಜ್ಜೈನಿಯಲ್ಲಿ ನಡೆದಿದ್ದು ಹಲ್ಲೆ ನಡೆಸಿದ ಗುಂಪಿನಲ್ಲಿದ್ದವರ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 
ಉಜ್ಜೈನಿಯ ದೇವಾಲಯದ ಬಳಿ ಈ ಘಟನೆ ನಡೆದಿದ್ದು ಸ್ವಯಂ ಘೋಷಿತ ಗೋರಕ್ಷಕರು ಹಲ್ಲೆ ನಡೆಸಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯನ್ನು ಬೆಲ್ಟ್ ನಲ್ಲಿ ಥಳಿಸುತ್ತಿರುವ ದೃಶ್ಯಾವಳಿಗಳು ಸೆರೆಯಾಗಿವೆ. ಆದರೆ ಪೊಲೀಸ್ ಅಧಿಕಾರಿ ಒಪಿ ಮಿಶ್ರಾ ಪ್ರಕಾರ ಹಣದ ವಿಚಾರಕ್ಕೆ ವಿವಾದ ಉಂಟಾಗಿದ್ದು, ವ್ಯಕ್ತಿಯನ್ನು ಥಳಿಸಲಾಗಿದೆ ಎಂದು ತಿಳಿದುಬಂದಿದೆ. 
ಥಳಿತಕ್ಕೊಳಗಾದ ವ್ಯಕ್ತಿಯಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ಚೇತನ್ ಸಂಖಲ್, ವಿಕಾಸ್, ನೀಲೇಶ್ ಹಾಗೂ ಶುಭಂ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಚೇತನ್ ಮತ್ತು ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಉಳಿದವರು ಕಾಣೆಯಾಗಿದ್ದಾರೆ ಎಂದು ಒಪಿ ಮಿಶ್ರಾ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT