ಸಂಗ್ರಹ ಚಿತ್ರ 
ದೇಶ

10 ವರ್ಷದ ಬಾಲಕಿ ಮೇಲೆ ಮಲ ತಂದೆಯಿಂದಲೇ ನಿರಂತರ ಅತ್ಯಾಚಾರ, ಗರ್ಭಿಣಿ ಬಾಲಕಿ ಸ್ಥಿತಿ ಗಂಭೀರ

23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಇನ್ನೂ ಹಸಿರಾಗಿರುವಾಗಲೇ ಮತ್ತದೇ ರೋಹ್ಟಕ್ ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕೆಗೆ ಬಂದಿದೆ.

ರೋಹ್ಟಕ್: 23 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು  ಭೀಕರವಾಗಿ ಕೊಲೆ ಮಾಡಿದ ಘಟನೆ ಇನ್ನೂ ಹಸಿರಾಗಿರುವಾಗಲೇ ಮತ್ತದೇ ರೋಹ್ಟಕ್ ನಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕೆಗೆ ಬಂದಿದೆ.

ಬಾಲಕಿಯ ಮಲತಂದೆಯೇ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡುವ ಮೂಲಕ ಆಕೆ ಗರ್ಭ ಧರಿಸುವಂತೆ ಮಾಡಿದ್ದು, ಐದು ತಿಂಗಳ ಗರ್ಭಿಣಿ ಬಾಲಕಿ ಸ್ಥಿತಿ ಇದೀಗ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಗಳ ಸ್ಥಿತಿ  ನೋಡಿದ ತಾಯಿ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ ಬಾಲಕಿ ತನ್ನ ಮಲತಂದೆಯೇ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ಹೇಳಿದ್ದಾಳೆ. ಅಲ್ಲದೆ ಈ  ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದನಂತೆ

ಅನಾರೋಗ್ಯದಿಂದ ಬೆಳಕಿಗೆ ಬಂದ ಘಟನೆ

ಕಳೆದ ಎರಡು ದಿನಗಳಿಂದ ಬಾಲಕಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಳಂತೆ. ಹೊಟ್ಟೆ ನೋವು, ಜ್ವರದಿಂದಾಗಿ ಬಳಲುತ್ತಿದ್ದ ಬಾಲಕಿಯನ್ನು ತಾಯಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾದ  ವಿಚಾರ ಬೆಳಕಿಗೆ ಬಂದಿದೆ.  ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT