ಕುಪ್ವಾರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ವಾರಿಪೋರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರು ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಗಡಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ, ದಕ್ಷಿಣ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.
ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ತಿಳಿದುಬಂದಿದ್ದು ಈ ಹಿನ್ನೆಲೆಯಲ್ಲಿ ಭಾರತೀಯ ಯೋಧರು ಉಗ್ರರ ಸದೆಬಡಿಯಲು ಕಾರ್ಯಾಚರಣೆಯನ್ನು ಮುಂದುವರೆಸಿದೆ.