ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಭೀಕರ ಅಪಘಾತ: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು, 2 ವಿದ್ಯಾರ್ಥಿಗಳ ಸಾವು

ಪಶ್ಚಿಮ ದೆಹಲಿಯ ಪಂಜಾಬಿ ಬಾಘ್ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆ ಮೇಲೆ ತೆರಳುತ್ತಿದ್ದ ಕಾರೊಂದು ಪರೀಕ್ಷೆಗೆ ತೆರಳುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರಿಗೆ ಗಂಭೀರವಾಗಿ ಗಾಯವಾಗಿರುವ...

ನವದೆಹಲಿ: ಪಶ್ಚಿಮ ದೆಹಲಿಯ ಪಂಜಾಬಿ ಬಾಘ್ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆ ಮೇಲೆ ತೆರಳುತ್ತಿದ್ದ ಕಾರೊಂದು ಪರೀಕ್ಷೆಗೆ ತೆರಳುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಐವರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. 
ಬೆಳಿಗ್ಗೆ 8 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನರೇಲಾ ಕಾಲೇಜಿನ 7 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಲುವಾಗೆ ಮೇಲ್ಸೇತುವೆ ಕೆಳಗೆ ಹೋಗುತ್ತಿದ್ದರು. ಈ ವೇಳೆ ಮೇಲ್ಸೇತುವೆ ಮೇಲೆ ಅತೀ ವೇಗವಾಗಿ ಚಲಿಸುತ್ತಿದ್ದ ಕಾರು ಕೆಳಗೆ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೈವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 
ವಿದ್ಯಾರ್ಥಿಯೊಬ್ಬ ಕಾರನ್ನು ವೇಗವಾಗಿ ಚಾಲನೆ ಮಾಡುತ್ತಿದ್ದ. ವೇಗ ಹೆಚ್ಚಾಗಿದ್ದರಿಂದ ಕಾರು ನಿಯಂತ್ರಣ ತಪ್ಪಿದೆ. ಮೇಲ್ಸೇತುವೆ ಮೇಲಿನ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಂತರ ಮೇಲ್ಸೇತುವೆ ಮೇಲಿಂದ ಕಾರು ಕೆಳಗೆ ಬಿದ್ದಿದೆ. 
ಕಾರು ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿಯನ್ನು ರಜತ್ (18) ಎಂದು ಗುರ್ತಿಸಲಾಗಿದೆ. ಸಂಚಿತ್ (18), ರಿತು (18) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ