ಸಾಂದರ್ಭಿಕ ಚಿತ್ರ 
ದೇಶ

ರೋಹಟಕ್ ಭೀಕರ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ: ತ್ವರಿತ ನ್ಯಾಯಾಲಯದಿಂದ ವಿಚಾರಣೆ

ಹರಿಯಾಣದ ಸೋನೆಪತ್ ನ 23 ವರ್ಷದ ದಲಿತ ಮಹಿಳೆ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ...

ಚಂಡಿಗಢ: ಹರಿಯಾಣದ ಸೋನೆಪತ್ ನ 23 ವರ್ಷದ ದಲಿತ ಮಹಿಳೆ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸೋಮವಾರ ತಿಳಿಸಿದ್ದಾರೆ.
'ನಾಗರಿಕ ಸಮಾಜದಲ್ಲಿ ನಡೆಯುವ ಅತ್ಯಂತ ಅಮಾನವೀಯ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು' ಎಂದು ಖಟ್ಟರ್ ಹೇಳಿದ್ದಾರೆ.
ರೋಹಟಕ್ ನಲ್ಲಿ ಕಳೆದ ಮೇ 9ರಂದು ಕೆಲಸಕ್ಕೆ ತೆರಳುತ್ತಿದ್ದ ಯುವತಿಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಏಳು ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಮೇ 11ರಂದು ಯುವತಿ ವಿರೂಪಗೊಂಡ ಮೃತದೇಹ ಪತ್ತೆಯಾಗಿತ್ತು. 
ಮದುವೆಗೆ ನಿರಾಕರಿಸಿದ ಯುವತಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಗುಪ್ತಾಂಗಕ್ಕೆ ಚೂಪಾದ ವಸ್ತುಗಳನ್ನು ತೂರಿರುವ ಅತ್ಯಾಚಾರಿಗಳು, ಬಳಿಕ ಯುವತಿಯ ಗುರುತು ಸಿಗಬಾರದೆಂದು ತಲೆಯ ಮೇಲೆ ವಾಹನ ಹರಿಸಿದ್ದಾರೆ. 
ಪ್ರಕರಣದ ತನಿಖೆಗೆ ಹರಿಯಾಣ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಈಗಾಗಲೇ ಪ್ರಮುಖ ಆರೋಪಿ ಸುಮಿತ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್